ಪತ್ನಿಯನ್ನು ಕೊಂದು ಸೂಟ್ ಕೇಸ್ ನಲ್ಲಿ ತುಂಬಿಸಿದ್ದ ಹಂತಕ ಪತಿ ಅರೆಸ್ಟ್
ಪತ್ನಿಯನ್ನು ಕೊಂದು ಆಕೆಯ ದೇಹವನ್ನು ತುಂಡರಿಸಿ ಸೂಟ್ ಕೇಸ್ ಗೆ ತುಂಬಿದ್ದ ಪ್ರಕರಣ ಸಂಬಂದ ಹಂತಕ ಪತಿಯನ್ನು ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಲಾಗಿದೆ.

ಹುಳಿಮಾವು ಬಳಿಯ ನಿವಾಸವೊಂದರಲ್ಲಿ ಸೂಟ್ಕೇಸ್ನಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದ್ದು, ಬೆಂಗಳೂರಿನಲ್ಲಿ ಸಂಚಲನ ಸೃಷ್ಟಿಸಿತ್ತು, 32 ವರ್ಷದ ಗೌರಿ ಅನಿಲ್ ಸಂಬೇಕರ್ ಅವರನ್ನು ಆಕೆಯ ಪತಿ ಮಹಾರಾಷ್ಟ್ರ ಮೂಲದ ರಾಕೇಶ್ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಆ ವ್ಯಕ್ತಿಯನ್ನು ಪುಣೆಯಲ್ಲಿ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಹುಳಿಮಾವು ಮನೆಯೊಂದಲ್ಲಿ ಬಾಡಿಗೆ ಇದ್ದ ಮಹಾರಾಷ್ಟ್ರ ಮೂಲದ ರಾಕೇಶ್ ಹಾಗೂ ಗೌರಿ ದಂಪತಿ ನಡುವೆ ಆರಂಭವಾದ ಜಗಳ ಪತ್ನಿ ಕೊಲೆಯಲ್ಲಿ ಅಂತ್ಯವಾಗಿದೆ. ಬಳಿಕ ಆಕೆ ದೇಹವನ್ನು ತುಂಡರಿಸಿ ಸೂಟ್ ಕೇಸ್ ನಲ್ಲಿ ತುಂಬಿಸಿ ಪರಾರಿಯಾಗಿದ್ದ.