ಬೆಲೆ ಏರಿಕೆ ವಿರೋಧಿಸಿ ರಾಜ್ಯ ಸರ್ಕಾರದ ವಿರುದ್ಧ ಏ.2ರಂದು ಅಹೋರಾತ್ರಿ ಧರಣಿ-ಬಿ. ವೈ. ವಿಜಯೇಂದ್ರ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ವಿರುದ್ಧ ಏಪ್ರಿಲ್ 2 ರಂದು ಸ್ವಾತಂತ್ರ್ಯ ಉದ್ಯಾನವನದಲ್ಲಿ ಅಹೋರಾತ್ರಿ ಧರಣಿ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ತಿಳಿಸಿದ್ದಾರೆ.

ಬಿಜೆಪಿಯ ಎಲ್ಲಾ ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರು, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು, ಜಿಲ್ಲಾ ಅಧ್ಯಕ್ಷರು, ರಾಜ್ಯದ ಎಲ್ಲ ಪದಾಧಿಕಾರಿಗಳು ಈ ಅಹೋರಾತ್ರಿ ಧರಣಿಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಏಪ್ರಿಲ್ 4 ರಂದು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ, 5 ರಂದು ಎಲ್ಲಾ ಮಂಡಲಗಳಲ್ಲಿಯೂ ಬೆಲೆ ಏರಿಕೆ ಧೋರಣೆ ಖಂಡಿಸಿ ಪ್ರತಿಭಟನೆ ಮಾಡಲಾಗುವುದು, ರಾಜ್ಯ ಸರ್ಕಾರ ಬೆಲೆ ಏರಿಕೆಯ ಗ್ಯಾರಂಟಿ ನೀಡಿದೆ. ನೀರು, ಪೆಟ್ರೋಲ್, ಹಾಲಿನ ದರವನ್ನು ಮೂರು ಬಾರಿ ಜಾಸ್ತಿ ಮಾಡಿದ್ದಾರೆ.
ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಗಳಲ್ಲಿ ಶೇ.4 ರಷ್ಟು ಮೀಸಲಾತಿ ವಿರೋಧಿಸಿ ಏಪ್ರಿಲ್ 10 ರ ನಂತರ ರಾಜ್ಯಾದ್ಯಂತ ಜಾಗೃತಿ ಆಂದೋಲನ ಆರಂಭಿಸುವುದಾಗಿ ಹೇಳಿದರು.



