ಉಪ್ಪಿನಂಗಡಿ: ಬೆಂಗಳೂರಿನಿಂದ ಬರುತ್ತಿದ್ದ ಬಸ್ ಪಲ್ಟಿ, ಓರ್ವ ಮೃತ್ಯು
ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟು, ಹತ್ತಕ್ಕೂ ಅಧಿಕ ಮಂದಿ ಗಂಭೀರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಸಮೀಪದ ನೀರಕಟ್ಟೆ ಎಂಬಲ್ಲಿ ಶುಕ್ರವಾರ ಬೆಳಗಿನ ಜಾವ ನಡೆದಿದೆ.

ಬೆಂಗಳೂರಿನಿಂದ ಉಡುಪಿಗೆ ತೆರಳುತ್ತಿದ್ದ ಖಾಸಗಿ ಬಸ್ ನೀರಕಟ್ಟೆಯ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಓರ್ವ ಬಸ್ಸಿನಡಿ ಸಿಲುಕಿ ಮೃತಪಟ್ಟಿದ್ದು, ಹತ್ತಕ್ಕೂ ಅಧಿಕ ಮಂದಿಗೆ ಗಾಯಗಳಾಗಿವೆ.
ಗಾಯಾಳುಗಳನ್ನು ಪುತ್ತೂರು ಹಾಗೂ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದ್ದು, ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.