ರಾಜಕೀಯ

ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ ರದ್ದುಗೊಳಿಸಲು ಮೋದಿ ಚಿಂತನೆ?ದೆಹಲಿ: ಕೇಂದ್ರ ಸರ್ಕಾರ 2006 ರಲ್ಲಿ ಯುಪಿಎ (UPA) ಸರ್ಕಾರ ಸ್ಥಾಪಿಸಿದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವನ್ನು(Ministry of Minority Affairs )ರದ್ದುಗೊಳಿಸುವ ಸಾಧ್ಯತೆಯಿದೆ.

ಈ ಸಚಿವಾಲಯವನ್ನು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದೊಂದಿಗೆ ವಿಲೀನಗೊಳಿಸುವ ಸಾಧ್ಯತೆಯಿದೆ ಎಂದು ಸರ್ಕಾರದ ಮೂಲಗಳು ಹೇಳಿರುವುದಾಗಿ ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ. ವಿಲೀನದ ನಂತರವೂ ಸಚಿವಾಲಯವು ಜಾರಿಗೊಳಿಸುತ್ತಿರುವ ಎಲ್ಲಾ ಯೋಜನೆಗಳು ಮುಂದುವರಿಯುತ್ತವೆ ಎಂದು ಅವರು ಹೇಳಿದ್ದಾರೆ.

ಸಚಿವಾಲಯದ ಅಧಿಕಾರಿಗಳು ಪ್ರತಿಕ್ರಿಯಿಸಲು ನಿರಾಕರಿಸಿದೆ. ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರವು ಅಲ್ಪ ಸಂಖ್ಯಾತ ವ್ಯವಹಾರಗಳಿಗಾಗಿ ಯಾವುದೇ ಪ್ರತ್ಯೇಕ ಸಚಿವಾಲಯದ ಅಗತ್ಯವಿಲ್ಲ ಎಂಬ ನಿಲುವು ಹೊಂದಿದೆ. ಯುಪಿಎಯ ತುಷ್ಟೀಕರಣ ನೀತಿಯ ಭಾಗವಾಗಿ ಸಚಿವಾಲಯವನ್ನು ರಚಿಸಲಾಗಿದೆ ಎಂದು ಅದು ನಂಬುತ್ತದೆ. ಈಗ, ಮೋದಿ ಸರ್ಕಾರವು ಅದನ್ನು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಅಡಿಯಲ್ಲಿ ‘ಅಲ್ಪಸಂಖ್ಯಾತ ವ್ಯವಹಾರಗಳ ಇಲಾಖೆ’ ಎಂದು ಅದನ್ನು ಮರಳಿ ತರಲು ಬಯಸಿದೆ ಎಂದು ಮೂಲವೊಂದು ತಿಳಿಸಿದೆ. ಕಾಂಗ್ರೆಸ್‌ನ ರಾಜ್ಯಸಭಾ ಸದಸ್ಯ ಸೈಯದ್ ನಸೀರ್ ಹುಸೇನ್ ಈ ಉದ್ದೇಶಿತ ನಡೆ ಸಮಾಜವನ್ನು ಧ್ರುವೀಕರಣಗೊಳಿಸುವ ಬಿಜೆಪಿಯ ಮತ್ತೊಂದು ಪ್ರಯತ್ನ ಎಂದು ಬಣ್ಣಿಸಿದರು.

Leave a Reply

Your email address will not be published. Required fields are marked *

error: Content is protected !!