ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿ: ನಾಲ್ವರು ಮಹಿಳೆಯರು ಮೃತ್ಯು
ಹುಬ್ಬಳ್ಳಿ ಹೊರವಲಯದ ನೂಲ್ವಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ನಾಲ್ವರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.

ಮೃತರನ್ನು ಸುಜಾತಾ ಹಿರೇಮಠ(60), ಗಾಯತ್ರಿ ಮಾಂತನಮಠ(67), ಶಕುಂತಲಾ ಹಿರೇಮಠ(72) ಸಂಪತ್ ಕುಮಾರಿ (63) ಎಂದು ಗುರುತಿಸಲಾಗಿದೆ.
ಮೃತರು ಹುಬ್ಬಳ್ಳಿಯ ಲಿಂಗರಾಜ ನಗರದ ನಿವಾಸಿಗಳು ಎಂದು ತಿಳಿದು ಬಂದಿದ್ದು, ಅಪಘಾತದಲ್ಲಿ ಗಾಯಗೊಂಡ ಕಾರು ಚಾಲಕ ವಿರೇಶ್ ಹಿರೇಮಠ(65) ಎಂಬವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.