ನಾಳೆ ದ್ವಿತೀಯ ಪಿಯು ಫಲಿತಾಂಶ: ಎಷ್ಟು ಗಂಟೆಗೆ? ನೋಡುವುದ್ಹೇಗೆ? ಇಲ್ಲಿದೆ ವಿವರ
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ನಾಳೆ(ಏಪ್ರಿಲ್ 8) ಪ್ರಕಟವಾಗಲಿದೆ. ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದತ್ತ ಎಲ್ಲರ ಚಿತ್ತ ನೆಟ್ಟಿದೆ.

ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಂಗಳವಾರ ಮಧ್ಯಾಹ್ನ 12.30ಕ್ಕೆ ಸುದ್ದಿಗೋಷ್ಠಿ ನಡೆಸಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಬಳಿಕ ಅಂದೆ ಮಧ್ಯಾಹ್ನ 1.30ಕ್ಕೆ ವೆಬ್ಸೈಟ್ನಲ್ಲಿ PUC ಫಲಿತಾಂಶ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು ಆನ್ಲೈನ್ನಲ್ಲಿ ಫಲಿತಾಂಶ ವೀಕ್ಷಣೆ ಮಾಡಬಹುದಾಗಿದೆ.
ರಿಸಲ್ಟ್ ನೋಡುವುದು ಎಲ್ಲಿ? ಹೇಗೆ?
ಪತ್ರಿಕಾಗೋಷ್ಠಿ ಸಚಿವ ಮಧುಬಂಗಾರಪ್ಪ ಅವರು ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಲಿದ್ದಾರೆ. ಆ ನಂತರ ಅಂದರೆ 1:30ರ ನಂತರ ಆನ್ಲೈನ್ ಮೂಲಕವೂ ಫಲಿತಾಂಶ ವೀಕ್ಷಿಸಬಹುದಾಗಿದೆ. ಜತೆಗೆ, ಅಂಕಪಟ್ಟಿ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. karresults.nic.in, ಹಾಗೂ kseab.karnataka.gov.in
ಈ ಎರಡು ವೆಬ್ಸೈಟ್ಗಳಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಲಭ್ಯವಿರಲಿದೆ.