ಜನತೆಗೆ ಬೆಲೆ ಏರಿಕೆಯ ಬಿಸಿ: ಅಡುಗೆ ಅನಿಲ ಸಿಲಿಂಡರ್ ದರ 50 ರೂ ಏರಿಕೆ
ನವದೆಹಲಿ: ಕಳೆದ ವಾರ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದ ಕೇಂದ್ರ ಸರ್ಕಾರ ಈಗ ಗೃಹ ಬಳಕೆ ಅಡುಗೆ ಅನಿಲದ ಸಿಲಿಂಡರ್ ಬೆಲೆಯನ್ನೂ ಏರಿಸಿದೆ.

14.2 ಕಿಲೋ ಎಲ್ಪಿಜಿ ಬೆಲೆಯನ್ನು ಸಿಲಿಂಡರ್ಗೆ 50 ರೂ. ಹೆಚ್ಚಳ ಮಾಡಿದೆ. ಸಾಮಾನ್ಯ ಬಳಕೆದಾರರಿಗೆ ಮಾತ್ರವಲ್ಲ, ಉಜ್ವಲ ಸ್ಕೀಮ್ ಫಲಾನುಭವಿಗಳಿಗೂ ಈ ಬೆಲೆ ಏರಿಕೆಯ ಬಿಸಿ ತಾಗಿದೆ. ಕೇಂದ್ರ ತೈಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಎಲ್ಪಿಜಿ ಬೆಲೆ ಏರಿಕೆ ಮಾಡಿರುವುದನ್ನು ಸೋಮವಾರ ತಿಳಿಸಿದ್ದಾರೆ.