ದಕ್ಷಿಣಕನ್ನಡ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಎ.8ರಂದು ಸಂಜೆ ವೇಳೆ ಮಳೆ ಸುರಿದಿದೆ. ಗುಡುಗು ಸಿಡಿಲು ಸಹಿತ ಭಾರೀ ಗಾಳಿ ಮಳೆಯಾಗಿದೆ.
ಮಾಣಿ- ಪುತ್ತೂರು ರಸ್ತೆಯ ನೇರಳಕಟ್ಟೆಯಲ್ಲಿ ತೆಂಗಿನ ಮರವೊಂದು ರಸ್ತೆಗೆ ಬಿದ್ದು ಸ್ಕೂಟರ್ ಸವಾರನೋರ್ವ ಕೂದಲೆಳೆಯ ಅಂತರದಲ್ಲಿ ಪಾರಾದ ಘಟನೆ ನಡೆದಿದೆ. ಘಟನೆಯಿಂದ ಹಲವು ವಿದ್ಯುತ್ ಕಂಬಗಳು ದರೆಗುರುಳಿವೆ.