ಕರಾವಳಿ

ಇಂದು ಮಂಗಳೂರಿನಲ್ಲಿ ಸಾಂಪ್ರದಾಯಿಕ ಪಿಲಿನಲಿಕೆ ಕಲಾವಿದರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಇಂದು ಪಿಲಿನಲಿಕೆ -ಮಿಥುನ್ ರೈ

ಮಂಗಳೂರು: ಪಿಲಿನಲಿಕೆ ಪ್ರತಿಷ್ಠಾನ ಮಂಗಳೂರು ಇದರ ಸಾರಥ್ಯದಲ್ಲಿ ನಮ್ಮ ಟಿವಿಯ ಸಹಯೋಗದಲ್ಲಿ ಪಿಲಿನಲಿಕೆ-7 ಮಂಗಳೂರಿನ ಮಂಗಳಾ ಕ್ರೀಡಾಂಗಣದ ಬಳಿಯ ಕರಾವಳಿ ಉತ್ಸವ ಮೈದಾನದಲ್ಲಿ ಆ.4ರಂದು ಬೆಳಿಗ್ಗೆ 10ರಿ೦ದ ನಡೆಯಲಿರುವುದು ಎಂದು ಪ್ರತಿಷ್ಠಾನದ ಅಧ್ಯಕ್ಷ ಮಿಥುನ್ ರೈ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಪಿಲಿನಲಿಕೆ-7 ಸ್ಪರ್ಧಾಕಣದಲ್ಲಿ ತುಳುನಾಡಿನ ಪ್ರತಿಷ್ಠಿತ ಮತ್ತು ಅಹ್ವಾನಿತ 12 ತಂಡಗಳು ಭಾಗವಹಿಸಲಿದ್ದು ಬಹುಮಾನ ರೂಪದಲ್ಲಿ ಪ್ರಥಮ ರೂ.3,00,000 ಮತ್ತು ಫಲಕ, ದ್ವಿತೀಯ ರೂ.2,00,000 ಮತ್ತು ಫಲಕ, ತೃತೀಯ ರೂ.1,00,000 ಮತ್ತು ಫಲಕ ಹಾಗೂ ವೈಯಕ್ತಿಕ ವಿಭಾಗದಲ್ಲಿ ಅತ್ಯುತ್ತಮ ಮರಿಹುಲಿ, ಕರಿಹುಲಿ, ಮುಡಿ ಹಾರಿಸುವುದು, ತಾಸೆ, ಬಣ್ಣಗಾರಿಕೆ, ಅತ್ಯುತ್ತಮ ಹುಲಿ ಕುಣಿತಕ್ಕೆ ತಲಾ ರೂ. 50,000 ನಗದು ಬಹುಮಾನಗಳನ್ನು ನೀಡಲಾಗುವುದು.

ಸ್ಪರ್ಧೆಯಲ್ಲಿ ಭಾಗವಹಿಸುವ ಪ್ರತಿ ತಂಡಕ್ಕೂ ರೂ.50,000 ವನ್ನು ಪ್ರೋತ್ಸಾಹಕ ರೂಪದಲ್ಲಿ ನೀಡಲಾಗುವುದು ಎಂದು ಈ ಬಾರಿಯ ಪಿಲಿನಲಿಕೆ 7ಕ್ಕೆ ಬಾಲಿವುಡ್‌ನ ಖ್ಯಾತ ತಾರೆಯರಾದ ಸುನಿಲ್ ಶೆಟ್ಟಿ, ಪೂಜಾ ಹೆಗ್ಡೆ ಹಾಗೂ ಹೆಸರಾಂತ ನಟ,ಇತ್ತೀಚಿನ ‘ಕಾಂತಾರ’ ಚಲನ ಚಿತ್ರದ ನಿರ್ದೇಶಕ ನಿರ್ದೇಶಕ ರಿಷಬ್ ಶೆಟ್ಟಿ ಸೇರಿದಂತೆ ಹಲವಾರು ನಟ ನಟಿಯರು, ತುಳು ರಂಗಭೂಮಿಯ ಹೆಸರಾಂತ ಕಲಾವಿದರು ತಾರಾ ಮೆರುಗನ್ನು ನೀಡಲಿದ್ದಾರೆ ಎಂದು ಮಿಥುನ್ ರೈ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!