ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಬಸ್, ಹಲವರಿಗೆ ಗಾಯ
ಕೆಎಸ್ಆರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿರುವ ಮನೆಯ ಮೇಲೆ ಬಿದ್ದು 30 ಅಡಿ ಪ್ರಪಾತಕ್ಕೆ ಉರುಳಿದ ಘಟನೆ ವರದಿಯಾಗಿದೆ.

ಕೊಪ್ಪ ತಾಲೂಕಿನ ಜಯಪುರ ಸಮೀಪದ ಜಲದುರ್ಗಾ ಬಳಿ ಘಟನೆ ನಡೆದಿದೆ. ಕೆಎಸ್ಆರ್ಟಿಸಿ ಬಸ್ ಬೆಂಗಳೂರಿನಿಂದ ಶೃಂಗೇರಿಗೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ. ಬಸ್ಸಿನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿದೆ.
ಗಾಯಾಳುಗಳನ್ನು ಕೊಪ್ಪ ಮತ್ತು ಜಯಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಬಿದ್ದ ಪರಿಣಾಮ ಮನೆ ಸಂಪೂರ್ಣ ಜಖಂಗೊಂಡಿದೆ.