ಕರಾವಳಿಕ್ರೈಂಜಿಲ್ಲೆ

ನಾಪತ್ತೆಯಾಗಿದ್ದ ಮುಹಮ್ಮದ್ ಶರೀಫ್ ಮೃತದೇಹ ಬಾವಿಯಲ್ಲಿ ಪತ್ತೆ

ಬುಧವಾರದಿಂದ ನಾಪತ್ತೆಯಾಗಿದ್ದ ಮೂಲ್ಕಿ ನಿವಾಸಿಯಾದ ಆಟೋ ಚಾಲಕನ ಮೃತದೇಹ ಕಾಸರಗೋಡಿನ ಮಂಜೇಶ್ವರ ಸಮೀಪದ ಕುಂಜತ್ತೂರು ಪದವು ಎಂಬಲ್ಲಿನ ನಿರ್ಜನ ಪ್ರದೇಶದ ಬಾವಿಯಲ್ಲಿ ಗುರುವಾರ ರಾತ್ರಿ ಪತ್ತೆಯಾಗಿದೆ.

ಇದೊಂದು ಕೊಲೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಮೂಲ್ಕಿ ಕೊಳ್ನಾಡಿನ ಮುಹಮ್ಮದ್ ಶರೀಫ್ ( 52) ಮೃತಪಟ್ಟವರು. ಬುಧವಾರ ಬೆಳಗ್ಗೆ ಎಂದಿನಂತೆ ರಿಕ್ಷಾ ಸಹಿತ ಮನೆಯಿಂದ ತೆರಳಿದ್ದ ಅವರು ವಾಪಸ್  ಮನೆಗೆ ಬಾರದೆ ನಾಪತ್ತೆಯಾಗಿದ್ದರು.


ಪತ್ನಿ ಕರೆ ಮಾಡಿದಾಗ ಮೊಬೈಲ್ ಸಂಪರ್ಕಕ ಕ್ಕೆ ಸಿಗದ ಕಾರಣ ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ನಡೆಯುತ್ತಿದ್ದಂತೆ ಗುರುವಾರ ರಾತ್ರಿ ಕೇರಳ- ಕರ್ನಾಟಕ ಗಡಿ ಭಾಗದ ಕುಂಜತ್ತೂರು ಪದವು ಎಂಬಲ್ಲಿ ನ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ. ಸಮೀಪದಲ್ಲಿ ಇವರ ಆಟೋ ರಿಕ್ಷಾ ಕೂಡಾ ಕಂಡು ಬಂದಿದೆ. ಮೃತ ದೇಹವನ್ನು ಇಂದು ಬೆಳಿಗ್ಗೆ ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆ ನಡೆಸುವ ಸಾಧ್ಯತೆ ಇದೆ. ಮಾಹಿತಿ ತಿಳಿದು ಶರೀಫ್ ರವರ ಮನೆಯವರು ಹಾಗೂ ಸಂಬಂಧಿಕರು ಮಂಜೇಶ್ವರಕ್ಕೆ ತಲುಪಿದ್ದು, ಶುಕ್ರವಾರ ಬೆಳಗ್ಗೆ ಪೊಲೀಸ್ ಶ್ವಾನ ದಳ, ವಿಧಿ ವಿಜ್ಞಾನ ತಜ್ಞರು ಸ್ಥಳಕ್ಕೆ ಆಗಮಿಸಿ ಮಾಹಿತಿ ಕಲೆ ಹಾಕಲಿದ್ದು, ಬಳಿಕ ಮೃತದೇಹ ವನ್ನು ಮೇಲಕ್ಕೆತ್ತಲಾಗುವುದು ಎಂದು ತಿಳಿದು ಬಂದಿದೆ.



ಮಾದಕ ವ್ಯಸನಿ ಗಳು ಬಾಡಿಗೆಗೆ ಕರೆದೊಯ್ದು ಈ ಕೃತ್ಯ ನಡೆಸಿದ್ದಾರೆಯೇ ಎಂಬ ಬಗ್ಗೆ ಅನುಮಾನ ವ್ಯಕ್ತವಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!