ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ
ಐಪಿಎಲ್ ಕ್ರಿಕೆಟ್ ನಲ್ಲಿ ದಾಖಲೆಗಳ ಮೇಲೆ ದಾಖಲೆಗಳನ್ನು ಬರೆಯುತ್ತಿರುವ ವಿರಾಟ್ ಕೊಹ್ಲಿ, ಮತ್ತೊಂದು ದಾಖಲೆಯನ್ನು ತಮ್ಮ ಖಾತೆಗೆ ಸೇರಿಸಿಕೊಂಡಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ನಾಯಕ ಕೊಹ್ಲಿ ಐಪಿಎಲ್‌ನಲ್ಲಿ 1000 ಬೌಂಡರಿಗಳನ್ನು ಬಾರಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ದಾಖಲೆಯನ್ನು ನಿರ್ಮಿಸಿದ್ದಾರೆ.
ಏಪ್ರಿಲ್ 10 ರಂದು ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಈ ದಾಖಲೆಯನ್ನು ಮಾಡಿದ್ದಾರೆ.
1000 ಬೌಂಡರಿ ಬಾರಿಸಿದ ಮೊದಲ ಬ್ಯಾಟ್ಸ್‌ಮನ್
ನಂತರ ನಾಲ್ಕನೇ ಓವರ್‌ನಲ್ಲಿ ಕೊಹ್ಲಿ ಕವರ್ಸ್ ಮೇಲೆ ಅದ್ಭುತ ಶಾಟ್ ಆಡಿ ಸಿಕ್ಸರ್ಗಟ್ಟಿದರು. ಇದರೊಂದಿಗೆ ಕೊಹ್ಲಿ ಐಪಿಎಲ್‌ನಲ್ಲಿ 1000 ಬೌಂಡರಿಗಳನ್ನು ಪೂರ್ಣಗೊಳಿಸಿದರು. ಕೊಹ್ಲಿ ಐಪಿಎಲ್‌ನ 249 ಇನ್ನಿಂಗ್ಸ್‌ಗಳಲ್ಲಿ ಈ 1000 ಬೌಂಡರಿಗಳ ಮೈಲಿಗಲ್ಲು ದಾಟಿದರು. ಒಟ್ಟಾರೆಯಾಗಿ, ಕೊಹ್ಲಿ ಇದುವರೆಗೆ 1001 ಬೌಂಡರಿಗಳನ್ನು ಬಾರಿಸಿದ್ದಾರೆ, ಇದರಲ್ಲಿ 280 ಸಿಕ್ಸರ್‌ಗಳು ಮತ್ತು 721ಫೋರ್ ಸೇರಿವೆ.
ಕೊಹ್ಲಿ ನಂತರ, ಅತಿ ಹೆಚ್ಚು ಬೌಂಡರಿಗಳನ್ನು ಬಾರಿಸಿದ ಎರಡನೇ ಆಟಗಾರ ಭಾರತದ ಮಾಜಿ ಬ್ಯಾಟ್ಸ್‌ಮನ್ ಶಿಖರ್ ಧವನ್, ಅವರ ಹೆಸರಿನಲ್ಲಿ 920 ಬೌಂಡರಿಗಳಿವೆ. ಡೇವಿಡ್ ವಾರ್ನರ್ (899) ಮೂರನೇ ಸ್ಥಾನದಲ್ಲಿದ್ದರೆ, ರೋಹಿತ್ ಶರ್ಮಾ (885) ನಾಲ್ಕನೇ ಸ್ಥಾನದಲ್ಲಿದ್ದಾರೆ.



