ರಾಜಕೀಯರಾಷ್ಟ್ರೀಯ

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೈನಾರ್ ನಾಗೇಂದ್ರನ್ ಆಯ್ಕೆ

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅಣ್ಣಾಮಲೈ ಅವರ ಅವಧಿ ಮುಗಿದ ಹಿನ್ನೆಲೆಯಲ್ಲಿ ಆ ಸ್ಥಾನಕ್ಕೆ ಇದೀಗ ಬಿಜೆಪಿಯ ತಿರುನಲ್ವೇಲಿ ಶಾಸಕ ನೈನಾರ್ ನಾಗೇಂದ್ರನ್ ಅವರನ್ನು ಆಯ್ಕೆ ಮಾಡಲಾಗಿದೆ. ನೈನಾರ್ ನಾಗೇಂದ್ರನ್ ಅವರನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಈ ಹುದ್ದೆಗೆ ನಾಮಪತ್ರ ಸಲ್ಲಿಸಿದ ಏಕೈಕ ವ್ಯಕ್ತಿ ಅವರಾದ್ದರಿಂದ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.




ಈ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಕೆ. ಅಣ್ಣಾಮಲೈ ನೈನಾರ್ ನಾಗೇಂದ್ರನ್ ಅವರ ಹೆಸರನ್ನು ಪ್ರಸ್ತಾಪಿಸಿದರು. ಬಿಜೆಪಿಯ ಇತರ ನಾಯಕರು ಅದನ್ನು ಅನುಮೋದಿಸಿದರು.

Leave a Reply

Your email address will not be published. Required fields are marked *

error: Content is protected !!