ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಎಐಎಡಿಎಂಕೆ ಜೊತೆ ಬಿಜೆಪಿ ಮೈತ್ರಿ: ಅಮಿತ್ ಶಾ ಘೋಷಣೆ
2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆಯನ್ನು ಅಧಿಕಾರದಿಂದ ಕೆಳಗಿಳಿಸಲು ತಮ್ಮ ಪಕ್ಷ ಎಐಎಡಿಎಂಕೆ ಜೊತೆ ಮೈತ್ರಿ ಮಾಡಿಕೊಳ್ಳಲಿದೆ ಎಂದು ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ನಾಯಕ ಅಮಿತ್ ಶಾ ಶುಕ್ರವಾರ ಘೋಷಿಸಿದ್ದಾರೆ.

2026ರಲ್ಲಿ ತಮಿಳುನಾಡಿನಲ್ಲಿ ಎನ್ ಡಿಎ ಸರ್ಕಾರ ರಚನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅಮಿತ್ ಶಾ, ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರು ಎನ್ ಡಿಎ ಮೈತ್ರಿಕೂಟದ ನೇತೃತ್ವ ವಹಿಸಲಿದ್ದಾರೆ ಎಂದು ಹೇಳಿದರು.