ಕ್ರೈಂರಾಜ್ಯ

ಹುಬ್ಬಳ್ಳಿ: ಐದು ವರ್ಷದ ಬಾಲಕಿಯ ಕೊಲೆ ಮಾಡಿದ್ದ ಆರೋಪಿ ಪೊಲೀಸರ ಗುಂಡೇಟಿಗೆ ಬಲಿ

ಹುಬ್ಬಳ್ಳಿಯ ಅಧ್ಯಾಪಕ್ ನಗರದಲ್ಲಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ್ದ ಆರೋಪಿ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ.


ಐದು ವರ್ಷದ ಬಾಲಕಿಯ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಹುಬ್ಬಳ್ಳಿ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಯ ಪತ್ತೆಗಾಗಿ ಹಲವು ತಂಡಗಳನ್ನು ರಚಿಸಿದ್ದರು. ಇನ್ನು ತನಿಖೆಗೆ ಇಳಿದ ಪೊಲೀಸರಿಗೆ ಆರೋಪಿ ಬಿಹಾರ ಮೂಲದ ರಿತೇಶ್ ಕುಮಾರ್ ಇರುವ ಜಾಗ ಪತ್ತೆಯಾಗಿತ್ತು. ಈ ವೇಳೆ ಪೊಲೀಸರು ಆರೋಪಿಯನ್ನು ಬಂಧಿಸಲು ಮುಂದಾದರು. ಆದರೆ ಪೊಲೀಸರ ಮೇಲೆ ರಿತೇಶ್ ಕುಮಾರ್ ಹಲ್ಲೆಗೆ ಯತ್ನಿಸಿದ್ದು ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದರು. ಪೊಲೀಸರು ಹಾರಿಸಿದ ಗುಂಡುಗಳು ಆರೋಪಿಯ ಕಾಲು ಮತ್ತು ಎದೆಯ ಭಾಗಕ್ಕೆ ನುಗ್ಗಿದ್ದರಿಂದ ಅಲ್ಲೆ ಕುಸಿದು ಬಿದ್ದನು. ಆರೋಪಿಯನ್ನು ರಕ್ಷಿಸುವ ಸಲುವಾಗಿ ಪೊಲೀಸರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲು ಮುಂದಾದರು. ಆದರೆ ಆತ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!