ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣ: ಆರೋಪಿಯನ್ನು ಬಂಧಿಸಿದ ಪೊಲೀಸರು
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ ಎಸಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತನನ್ನು ಮಧುಕರ ಸೋಮವಂಶ (65) ಎಂದು ತಿಳಿದು ಬಂದಿದೆ.

ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಾಲೂಕಿನ ತಕ್ರಾರವಾಡಿ ಗ್ರಾಮದ ನಿವಾಸಿ ಎಂದು ಹೇಳಲಾಗಿದೆ. ಅಪಘಾತ ಎಸಗಿದ ಲಾರಿಯನ್ನು ಕಿತ್ತೂರು ಠಾಣೆ ಪೊಲೀಸರು ಜಪ್ತಿ ಮಾಡಿದ್ದಾರೆ.
ಜ.14 ರಂದು ಬೆಳಗ್ಗಿನ ಜಾವ ಹೆಬ್ಬಾಳ್ಕರ್ ಕಾರಿಗೆ ತಾಗಿಸಿ ಲಾರಿ ಚಾಲಕ ಪರಾರಿಯಾಗಿದ್ದ. ಬೆಂಗಳೂರಿನಿಂದ ಬೆಳಗಾವಿಗೆ ಬರುವಾಗ ಕಿತ್ತೂರು ಸಮೀಪದ ಅಂಬಡಗಟ್ಟಿಯಲ್ಲಿ ಅಪಘಾತ ಸಂಭವಿಸಿತ್ತು. ಘಟನೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೆನ್ನಿಗೆ ಗಂಭೀರ ಗಾಯ ಆಗಿತ್ತು.
ಈ ಕುರಿತು ಸಚಿವೆ ಹೆಬ್ಬಾಳ್ಕರ್ ಅವರ ಕಾರು ಚಾಲಕ ಶಿವಪ್ರಸಾದ್ ಕಿತ್ತೂರು ಠಾಣೆಯಲ್ಲಿ ದೂರು ದಾಖಲಿಸಿದ್ದ ದೂರಿನ ಅನ್ವಯ ಪೊಲೀಸರು ಪ್ರಕರಣದ ವಿಚಾರಣೆ ಆರಂಭಿಸಿದ್ದರು.