1ನೇ ತರಗತಿ ಸೇರ್ಪಡೆಗೆ ಮಕ್ಕಳ ವಯೋಮಿತಿ ಸಡಿಲಗೊಳಿಸಿದ ಸರಕಾರ
ಬೆಂಗಳೂರು: ಶಾಲಾ ಮಕ್ಕಳ ದಾಖಲಾತಿ ವಯೋಮಿತಿ ವಿಚಾರದಲ್ಲಿ ಪೋಷಕರ ಒತ್ತಡಕ್ಕೆ ಶಿಕ್ಷಣ ಇಲಾಖೆ ಕೊನೆಗೂ ಮಣಿದಿದೆ. 1ನೇ ತರಗತಿಗೆ ಮಕ್ಕಳ ಸೇರ್ಪಡೆಗೆ ಇರುವ ವಯೋಮಿತಿಯನ್ನು ಕರ್ನಾಟಕ ಶಿಕ್ಷಣ ಇಲಾಖೆ ಅಲ್ಪ ಸಡಿಲಗೊಳಿಸಿದೆ.

ಮಕ್ಕಳಿಗೆ 5 ವರ್ಷ 5 ತಿಂಗಳು ಆಗಿದ್ದರೂ ಅವರು ಶಾಲೆಗೆ ದಾಖಲಾಗಲು ಅವಕಾಶ ನೀಡಲಾಗುತ್ತದೆ. ಇದಕ್ಕೂ ಮುನ್ನ ರಾಜ್ಯ ಪಠ್ಯಕ್ರಮದಲ್ಲಿ 1ನೇ ತರಗತಿಗೆ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳಲು 6 ವರ್ಷ ಆಗಿರಬೇಕಾಗಿರುವುದು ಕಡ್ಡಾಯವಾಗಿತ್ತು. ಎಸ್‌ಇಪಿ ವರದಿ ಆಧಾರದ ಮೇಲಿನ ಕಡ್ಡಾಯ 6 ವರ್ಷ ವಯೋಮಿತಿಯನ್ನು ಸಡಿಲಿಸಲಾಗಿದೆ. ಆದರೆ, ಒಂದನೇ ತರಗತಿ ಸೇರ್ಪಡೆಗೆ ಯುಕೆಜಿ ಆಗಿರಬೇಕು. ಆದರೆ, ಇದು ಈ ವರ್ಷಕ್ಕೆ ಮಾತ್ರ ಅನ್ವಯ. ಮುಂದಿನ ವರ್ಷದಿಂದ ಕಡ್ಡಾಯ ವಯೋಮಿತಿ 6 ವರ್ಷವೇ ಇರಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದ್ದಾರೆ.