ಕ್ರೈಂರಾಜ್ಯ

ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳಿಂದ ಫೈರಿಂಗ್

ಬೆಂಗಳೂರು: ಮುತ್ತಪ್ಪ ರೈ ಅವರ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಫೈರಿಂಗ್ ಮಾಡಿರುವ ಘಟನೆ ವರದಿಯಾಗಿದೆ.

ರಾಮನಗರ ತಾಲೂಕಿನ ಬಿಡದಿಯ ಮುತ್ತಪ್ಪ ರೈ ಮನೆ ಬಳಿಯೇ ನಡೆದಿದೆ. ದುಷ್ಕರ್ಮಿಗಳು ಮನೆಯ ಕೂಗಳತೆ ದೂರದಲ್ಲೇ ರಾತ್ರಿ ಸುಮಾರು 11.30ಕ್ಕೆ ರಿಕ್ಕಿ ರೈ ಮೇಲೆ ಎರಡು ಸುತ್ತಿನ ಗುಂಡಿನ ದಾಳಿ ಮಾಡಿದ್ದಾರೆ. ಆದರೆ ಹಿಂಬದಿ ಸೀಟ್ನಲ್ಲಿದ್ದ ರಿಕ್ಕಿ ರೈಗೆ ಮೂಗು, ಕೈಗೆ ಗುಂಡು ತಾಕಿದ್ದು, ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ತನ್ನ ಫಾರ್ಚ್ಯೂನರ್ ಕಾರಲ್ಲಿ ಬೆಂಗಳೂರಿಗೆ ಹೊರಟಿದದ್ದ ವೇಳೆ ಮನೆಯ ಗೇಟ್ ಬಳಿ ದುಷ್ಕರ್ಮಿ, ಎರಡು ಸುತ್ತಿನ ಫೈರಿಂಗ್ ಮಾಡಿದ್ದಾನೆ. 70 ಎಂಎಂ ಬುಲೆಟ್ನ ಶಾಟ್ಗನ್ ಬಳಸಿ ಫೈರಿಂಗ್ ಮಾಡಲಾಗಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!