ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಬರ್ಬರ ಕೊಲೆ
ಬೆಂಗಳೂರು: ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ (68) ಅವರನ್ನು ಕೊಲೆ ಮಾಡಲಾಗಿದೆ.

ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್ ನಿವಾಸದಲ್ಲಿ ಓಂ ಪ್ರಕಾಶ್ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಓಂ ಪ್ರಕಾಶ್ ಅವರು 1981ರ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿದ್ದರು. ಅವರು 2015ರಲ್ಲಿ ರಾಜ್ಯದ 38ನೇ ಡಿಜಿ- ಐಜಿಪಿಯಾಗಿದ್ದರು.
ನಿವೃತ್ತ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ ಅವರನ್ನು ಅವರ ಪತ್ನಿಯೇ ಕೊಲೆ ಮಾಡಿರುವ ಅನುಮಾನ ವ್ಯಕ್ತವಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಓಂ ಪ್ರಕಾಶ್ ಅವರ ಮೃತದೇವನ್ನು ಮರಣೋತ್ತರ ಪರೀಕ್ಷೆಗಾಗಿ ಸೆಂಟ್ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
1981 ರ ಬ್ಯಾಚ್ ಐಪಿಎಸ್ ಅಧಿಕಾರಿಯಾದ ಓಂ ಪ್ರಕಾಶ್, 38ನೇ ಡಿಜಿ ಮತ್ತು ಐಜಿಪಿಯಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲು ಗೃಹರಕ್ಷಕ ದಳದ ಕಮಾಂಡೆಂಟ್ ಜನರಲ್, ನಾಗರಿಕ ರಕ್ಷಣಾ ನಿರ್ದೇಶಕ ಮತ್ತು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.