ಪುತ್ತೂರಿನಲ್ಲಿ ಪ್ಯಾರಾಮೆಡಿಕಲ್ ಕಲಿಕೆಗೆ ‘ಬ್ರೈಟ್ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ’ ಸುವರ್ಣಾವಕಾಶ
ಪುತ್ತೂರು: ವೈದ್ಯಕೀಯ ಕ್ಷೇತ್ರದಲ್ಲಿ ಬಹುಬೇಡಿಕೆಯಿರುವ ಪ್ಯಾರಾಮೆಡಿಕಲ್ ಕಲಿಯಲು ಆಸಕ್ತಿಯಿರುವವರಿಗೆ ‘ಬ್ರೈಟ್ ಪ್ಯಾರಾಮೆಡಿಕಲ್ ಕಾಲೇಜು’ ಸುವರ್ಣಾವಕಾಶವನ್ನು ಒದಗಿಸುತ್ತಿದೆ. ಕಳೆದ 7 ವರ್ಷಗಳಿಂದ ಪುತ್ತೂರಿನ ಚೇತನಾ ಆಸ್ಪತ್ರೆಯಲ್ಲಿ ಕಾರ್ಯಾಚರಿಸುತ್ತಿರುವ ಬ್ರೈಟ್ ಪ್ಯಾರಾಮೆಡಿಕಲ್ ಕಾಲೇಜು ಅರೆ ವೈದ್ಯಕೀಯ ಕ್ಷೇತ್ರದಲ್ಲಿರುವ ಕೋರ್ಸ್‌ಗಳನ್ನು ನಡೆಸುತ್ತಿದ್ದು ಇಲ್ಲಿ ಕಲಿತ ಹಲವಾರು ಮಂದಿ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಉದ್ಯೋಗ ಪಡೆದುಕೊಂಡಿದ್ದಾರೆ. ಅಲ್ಲದೇ ರಾಷ್ಟ್ರೀಯ, ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಉದ್ಯೋಗವಕಾಶಗಳನ್ನು ಪಡೆದುಕೊಂಡಿದ್ದು ಸರಕಾರಿ, ಖಾಸಗೀ ಹಾಗೂ ಸ್ವಉದ್ಯೋಗ ಮಾಡುವ ಅವಕಾಶವನ್ನು ಕಲ್ಪಿಸುವಲ್ಲಿ ಈ ಸಂಸ್ಥೆ ಯಶಸ್ವಿಯಾಗಿದೆ.

ಡಾ.ಜೆ.ಸಿ ಅಡಿಗ(ಹೃದ್ರೋಗ ತಜ್ಞರು) ಹಾಗೂ ಡಾ.ಶ್ರೀಕಾಂತ್ ರಾವ್ ಐ(ಮಕ್ಕಳ ತಜ್ಞರು) ಇವರ ಮಾರ್ಗದರ್ಶನದಲ್ಲಿ ಸಂಸ್ಥೆ ಕಳೆದ 7 ವರ್ಷಗಳಿಂದ ಯಶಸ್ವಿಯಾಗಿ ನಡೆಯುತ್ತಾ ಬಂದಿದ್ದು ಸುಮಾರು 500ಕ್ಕೂ ಅಧಿಕ ವಿದ್ಯಾರ್ಥಿಗಳು ಇಲ್ಲಿ ವಿದ್ಯಾರ್ಜನೆಗೈದಿದ್ದಾರೆ.
ಇಲ್ಲಿ ಎಸ್ಸೆಸ್ಸೆಲ್ಸಿ ಪಾಸ್ ಆದವರು, ಪ್ರಥಮ/ದ್ವಿತೀಯ ಪಿಯುಸಿ ಪಾಸ್/ಫೇಲ್ ಆದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಇಲ್ಲಿ ಪ್ರವೇಶ ಪಡೆಯಬಹುದಾಗಿದೆ. ಇಲ್ಲಿ ಮೆಡಿಕಲ್ ಲ್ಯಾಬೋರೇಟರಿ ಟೆಕ್ನಾಲಜಿ, ಆಪರೇಷನ್ ಥಿಯೇಟರ್ ಟೆಕ್ನಾಲಜಿ, ಎಕ್ಸ್‌ರೇ ಟೆಕ್ನಾಲಜಿ, ನರ್ಸಿಂಗ್ ಹಾಗೂ ಇನನಿತರ ಅತೀ ಬೇಡಿಕೆಯಿರುವ ಕೋರ್ಸುಗಳು ಲಭ್ಯವಿದೆ. ಆರ್ಥಿಕವಾಗಿ ಕಷ್ಟದಲ್ಲಿರುವವರು ಕಂತುಗಳ ಮೂಲಕವೂ ಫೀಸ್ ಪಾವತಿಸಲು ಸಂಸ್ಥೆ ಅವಕಾಶ ನೀಡುತ್ತಿದ್ದು ಇದು ವಿದ್ಯಾರ್ಥಿಗಳ ಪಾಲಿಗೆ ಬಹು ಉಪಯುಕ್ತವಾಗಿದೆ.

ಸಾಂದರ್ಭಿಕ ಚಿತ್ರ
ಸಂಸ್ಥೆಯಲ್ಲಿ ಈಗಾಗಲೇ ದಾಖಲಾತಿ ನಡೆಯುತ್ತಿದ್ದು ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ. ಆಸಕ್ತರು ಕೂಡಲೇ ಸಂಸ್ಥೆಯನ್ನು ಸಂಪರ್ಕಿಸುವಂತೆ ಬ್ರೈಟ್ ಪ್ಯಾರಾಮೆಡಿಕಲ್ ಕಾಲೇಜಿನ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9686837228, 08251-298228, 7619237228 ನಂಬರನ್ನು ಸಂಪರ್ಕಿಸಬಹುದಾಗಿದೆ.
2018ರಲ್ಲಿ ಹೆಲ್ತ್ ಕೇರ್ ಶಿಕ್ಷಣ ಕ್ಷೇತ್ರದಲ್ಲಿ ಬ್ರೈಟ್ ಪ್ಯಾರಾಮೆಡಿಕಲ್ ಸಂಸ್ಥೆಯನ್ನು ಕಟ್ಟಿ ಬೆಳೆಸಿದ್ದು ಪುತ್ತೂರಿನ ಆಸುಪಾಸಿನ ನೂರಾರು ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ. ಬಡವ-ಶ್ರೀಮಂತ ಎನ್ನುವ ವ್ಯತ್ಯಾಸವಿಲ್ಲದೇ ಎಲ್ಲ ಜಾತಿ, ಮತ, ಧರ್ಮದ ವಿದ್ಯಾರ್ಥಿ/ವಿದ್ಯಾಥಿನಿಯರಿಗೆ ಸ್ಪರ್ಧಾತ್ಮಕ ದರದಲ್ಲಿ ಕಲಿಯಲು ಉತ್ತಮ ಅವಕಾಶ ಮಾಡಿಕೊಟ್ಟಿದ್ದು ವಿದ್ಯಾರ್ಥಿ ಜೀವನದ ಮೌಲ್ಯವನ್ನು ಎತ್ತಿ ಹಿಡಿಯುವುದು ನಮ್ಮ ಗುರಿಯಾಗಿದೆ. ನಮ್ಮಲ್ಲಿ ವಿದ್ಯಾರ್ಜನೆಗೈದ ವಿದ್ಯಾರ್ಥಿ/ವಿದ್ಯಾರ್ಥಿನಿಯರು ತಾಲೂಕು ಮಾತ್ರವಲ್ಲದೇ ಮಂಗಳೂರು, ಬೆಂಗಳೂರು, ಸೌದಿ ಅರೇಬಿಯಾ, ದುಬೈಯಲ್ಲಿ ಸರಕಾರಿ ಮತ್ತು ಖಾಸಗಿ ಕ್ಷೇತ್ರದಲ್ಲಿ ಉದ್ಯೋಗದಲ್ಲಿದ್ದು ನಮಗೆ ಸಂತಸದ ವಿಚಾರ.
ಎಂದು ಬ್ರೈಟ್ ಕಾಲೇಜ್ ಆಫ್ ಪ್ಯಾರಾಮೆಡಿಕಲ್ ಸೈನ್ಸ್ & ಹೆಲ್ತ್‌ಕೇರ್ ಇನ್ಸ್ಟಿಟ್ಯೂಷನ್ಸ್ ನ ಆಡಳಿತಾಧಿಕಾರಿ
ಮುಹಮ್ಮದ್ ಸಲೀಂ ತಿಳಿಸಿದ್ದಾರೆ.