ಸೌದಿ ಅರೇಬಿಯಾ ಪ್ರವಾಸ ಕಡಿತಗೊಳಿಸಿ ಭಾರತಕ್ಕೆ ಆಗಮಿಸಿದ ಪ್ರಧಾನಿ ಮೋದಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೌದಿ ಅರೇಬಿಯಾ ಪ್ರವಾಸವನ್ನು ಅರ್ಧದಲ್ಲೇ ಕಡಿತಗೊಳಿಸಿ ಭಾರತಕ್ಕೆ ಆಗಮಿಸಿದ್ದಾರೆ.

ಪ್ರಧಾನಿ ಮೋದಿ ಅವರು ಸೌದಿ ಅರೇಬಿಯಾಕ್ಕೆ ಎರಡು ದಿನಗಳ ಪ್ರವಾಸ ಕೈಗೊಂಡಿದ್ದರು. ಪೂರ್ವ ನಿಗದಿ ಕಾರ್ಯಕ್ರಮದ ಪ್ರಕಾರ ಇಂದು ರಾತ್ರಿ ಮೋದಿ ಮರಳಬೇಕಿತ್ತು. ಆದರೆ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ಹಿನ್ನೆಲೆಯಲ್ಲಿ ಪ್ರವಾಸವನ್ನು ಅರ್ಧದಲ್ಲೇ ಮೊಟಕುಗೊಳಿಸಿ ಮಂಗಳವಾರ ರಾತ್ರಿಯೇ ಭಾರತದತ್ತ ಪ್ರಯಾಣ ಬೆಳೆಸಿದ್ದರು.
ಸೌದಿ ಅರೇಬಿಯಾ ಮಂಗಳವಾರ ರಾತ್ರಿ ಆಯೋಜಿಸಿದ್ದ ಅಧಿಕೃತ ಭೋಜನಕೂಟದಲ್ಲಿ ಮೋದಿ ಭಾಗಿಯಾಗಬೇಕಿತ್ತು. ಆದರೆ ಉಗ್ರರ ದಾಳಿಯ ವಿಚಾರ ತಿಳಿದ ಬಳಿಕ ಪೂರ್ವ ನಿಗದಿಯಾಗಿದ್ದ ಎಲ್ಲಾ ಕಾರ್ಯಕ್ರಮಗಳನ್ನು ಮೋದಿ ರದ್ದುಗೊಳಿಸಿದ್ದರು.