ಪಹಲ್ಗಾಮ್ ದಾಳಿ: ಮೃತ ಕನ್ನಡಿಗರ ಕುಟುಂಬಕ್ಕೆ ಪರಿಹಾರ ಪ್ರಕಟಿಸಿದ ಸಿದ್ದರಾಮಯ್ಯ
ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಮಂಗಳವಾರ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರಿಗ ಕುಟುಂಬಸ್ಥರಿಗೆ ತಲಾ 10 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ತಿಳಿಸಿದ್ದಾರೆ.

ಮೂವರು ಕನ್ನಡಿಗರು ಸೇರಿದಂತೆ 28 ಮಂದಿ ಮೃತಪಟ್ಟಿದ್ದಾರೆ.
ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟಿರುವ ರಾಜ್ಯದ ಪ್ರತಿ ನಾಗರಿಕರ ಕುಟುಂಬಗಳಿಗೆ ತಲಾ ಹತ್ತು ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.