ಕರಾವಳಿಕ್ರೈಂ

ಮಂಗಳೂರು: ಬಸ್ಸಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್ ಪೊಲೀಸ್ ವಶಕ್ಕೆ

ಮಂಗಳೂರು: ಕೆಎಸ್ ಆರ್ ಟಿಸಿ ಬಸ್ ನಲ್ಲಿ ನಿರ್ವಾಹಕನೊಬ್ಬ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ನಡೆದಿದ್ದು ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.




ಬಾಗಲಕೋಟೆ ಮೂಲದ ಪ್ರದೀಪ್‌ (40) ಪೊಲೀಸರು ವಶಕ್ಕೆ ಪಡೆದ ಆರೋಪಿ.



ಮಂಗಳೂರಿನ ಮುಡಿಪು -ಸ್ಟೇಟ್‌ ಬ್ಯಾಂಕ್‌ ಭಾಗದ ಕೆಎಸ್ ಆರ್ ಟಿಸಿ ಬಸ್ಸಿನಲ್ಲಿ ನಿರ್ವಾಹಕ ಪ್ರದೀಪ್‌ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ವರದಿಯಾಗಿತ್ತು. ಬಸ್ ನಲ್ಲಿ ಪ್ರಯಾಣಿಕರೊಬ್ಬರು ಮಾಡಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಪೊಲೀಸರು, ಆರೋಪಿ ಪ್ರದೀಪ್‌ ನನ್ನು ವಶಕ್ಕೆ ಪಡೆದಿದ್ದಾರೆ.



ಏಪ್ರಿಲ್ 22 ರಂದು ಮುಡಿಪುವಿನಿಂದ ಸ್ಟೇಟ್‌ ಬ್ಯಾಂಕ್ ನತ್ತ ತೆರಳುತ್ತಿದ್ದ ಬಸ್ ನಲ್ಲಿ ಯುವತಿ ನಿದ್ರೆಗೆ ಜಾರಿದ್ದರು ಎನ್ನಲಾಗಿದೆ. ಆ ಸಂದರ್ಭದಲ್ಲಿ ಕಂಡಕ್ಟರ್ ಆ ಯುವತಿಗೆ ಕಿರುಕುಳ ನೀಡಿದ್ದಾನೆ. ಇದನ್ನು ಪ್ರಯಾಣಿಕರೊಬ್ಬರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು.

Leave a Reply

Your email address will not be published. Required fields are marked *

error: Content is protected !!