ಭಾರತದ ವಿರುದ್ಧ ದ್ವೇಷ, ನಕಲಿ ಸುದ್ದಿ ಪ್ರಸಾರ ಪಾಕಿಸ್ತಾನದ 17 ಯೂಟ್ಯೂಬ್ ಚಾನೆಲ್ ಗಳನ್ನು ದೇಶದಲ್ಲಿ ನಿಷೇಧಿಸಿದ ಕೇದ್ರ ಸರ್ಕಾರ
ನವದೆಹಲಿ: ಪಹಲ್ಗಾಮ್ ಉಗ್ರರ ದಾಳಿ ಘಟನೆ ಬೆನ್ನಲ್ಲೇ ಭಾರತ ಹಾಗೂ ಪಾಕಿಸ್ತಾನದ ನಡುವಿನ ಸಂಬಂಧ ಮತ್ತಷ್ಟು ಹದಗೆಟ್ಟಿದ್ದು, ಇದರ ನಡುವಲ್ಲೇ ಭಾರತದ ವಿರುದ್ಧವಾಗಿ ದ್ವೇಷ ಹಾಗೂ ನಕಲಿ ಸುದ್ದಿ ಪ್ರಸಾರ ಮಾಡುತ್ತಿರುವ ಪಾಕಿಸ್ತಾನದ 17 ಯೂಟ್ಯೂಬ್ ಚಾನೆಲ್ ಗಳನ್ನು ಕೇದ್ರ ಸರ್ಕಾರ ಬ್ಲಾಕ್ (ನಿಷೇಧ) ಮಾಡಿದೆ ಎಂದು ತಿಳಿದು ಬಂದಿದೆ.

ಕೋಮು ಉದ್ವಿಗ್ನತೆಯನ್ನು ಪ್ರಚೋದಿಸುವ ಮತ್ತು ಭಾರತದ ಸಾರ್ವಭೌಮತ್ವ ಮತ್ತು ಭದ್ರತೆಯನ್ನು ದುರ್ಬಲಗೊಳಿಸುವ ಗುರಿಯನ್ನು ಹೊಂದಿರುವ ಪ್ರಚೋದನಕಾರಿ, ಸುಳ್ಳು ಸುದ್ದಿಗಳನ್ನು ಹರಡಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪಾಕಿಸ್ತಾನದ ಪ್ರಮುಖ ಸುದ್ದಿ ಸಂಸ್ಥೆಗಳು ಮತ್ತು ಮಾಜಿ ಕ್ರಿಕೆಟಿಗ ಶೋಯೆಬ್ ಅಖ್ತರ್ ಸೇರಿದಂತೆ 16 ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್‌ಗಳನ್ನು ನಿಷೇಧಿಸಿದೆ ಎಂದ ಮೂಲಗಳು ತಿಳಿಸಿವೆ.