ಸಿಎಂ ಸಿದ್ದರಾಮಯ್ಯ ಭಾಷಣದ ವೇಳೆ ಕಪ್ಪು ಬಟ್ಟೆ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತೆಯರು
ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಷಣ ಮಾಡುವ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತೆಯರು ಕಪ್ಪು ಬಟ್ಟೆ ಪ್ರದರ್ಶಿಸಿದ ಘಟನೆ ನಡೆದಿದೆ.

ಕೇಂದ್ರ ಸರ್ಕಾರದ ಬೆಲೆ ಏರಿಕೆಯನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ಮುಖಂಡರು ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಪ್ರತಿಭಟನಾ ಸಮಾವೇಶ ನಡೆಸಿದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡುತ್ತಿದ್ದಾಗ ಬಿಜೆಪಿ ಕಾರ್ಯಕರ್ತೆ ಘೋಷಣೆ ಕೂಗಿದರು. ಉಳಿದ ಬಿಜೆಪಿ ಕಾರ್ಯಕರ್ತೆಯರು ಕಪ್ಪು ಬಟ್ಟೆ ಪ್ರದರ್ಶನ ಮಾಡಿದರು. ಕೂಡಲೆ ಸ್ಥಳದಲ್ಲಿದ್ದ ಪೊಲೀಸರು ಬಿಜೆಪಿ ಕಾರ್ಯಕರ್ತೆಯರನ್ನು ವಶಕ್ಕೆ ಪಡೆದರು ಎಂದು ತಿಳಿದು ಬಂದಿದೆ.