ಕರಾವಳಿಕ್ರೈಂ

ಮಂಗಳೂರು: ಯುವಕನ ಗುಂಪು ಹತ್ಯೆ, ಮತ್ತೆ ಐವರು ಆರೋಪಿಗಳ ಬಂಧನ

ಮಂಗಳೂರು: ನಗರದ ಹೊರವಲಯದ ಕುಡುಪು ಬಳಿ ಯುವಕನನ್ನು ಕಲ್ಲಿನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸರು ಮತ್ತೆ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಮಂದಿಯನ್ನು ಪೊಲೀಸರು ಈಗಾಗಲೇ ಬಂಧಿಸಿದ್ದರು. ಇದೀಗ ಪ್ರಕರಣದಲ್ಲಿ ಬಂಧಿತರಾದ ಒಟ್ಟು ಆರೋಪಿಗಳ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.



ಹತ್ಯೆಯಾದ ವ್ಯಕ್ತಿಯನ್ನು ಕೇರಳದ ವಯನಾಡ್ ಜಿಲ್ಲೆಯ ಸುಲ್ತಾನ್ ಬತ್ತೇರಿ ತಾಲೂಕಿನ ಪುಲ್ಪಲ್ಲಿ ಗ್ರಾಮದ ನಿವಾಸಿ ಅಶ್ರಫ್ ಎಂದು ಗುರುತಿಸಲಾಗಿದೆ. ಅವರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದ್ದು, ಅವರು ಖುದ್ದಾಗಿ ಗುರುತಿಸಲು ಮತ್ತು ಮುಂದಿನ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಮಂಗಳೂರಿಗೆ ಪ್ರಯಾಣಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Leave a Reply

Your email address will not be published. Required fields are marked *

error: Content is protected !!