KSRTC ಬಸ್ಸಿನಲ್ಲಿ ನಮಾಜ್ ಮಾಡಿದ್ದ ಚಾಲಕ ಅಮಾನತು
ಹುಬ್ಬಳ್ಳಿ: KSRTC ಬಸ್ ಅನ್ನು ಮಾರ್ಗ ಮಧ್ಯೆ ನಿಲ್ಲಿಸಿ ಬಸ್ ನಲ್ಲೇ ನಮಾಜ್ ಮಾಡಿದ್ದ ಚಾಲಕನನ್ನು ಅಮಾನತು ಮಾಡಲಾಗಿದೆ.

ಎ. 29ರಂದು ಹುಬ್ಬಳ್ಳಿಯಿಂದ ಹಾವೇರಿಗೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಈ ಘಟನೆ ನಡೆದಿದ್ದು, ಬಸ್ ಚಾಲಕ ಕಮ್ ನಿರ್ವಾಹಕ ಎ.ಆರ್ ಮುಲ್ಲಾ ಬಸ್ ನಲ್ಲೇ ನಮಾಜ್ ಮಾಡುತ್ತಿರುವ ವಿಡಿಯೊವನ್ನು ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್ ನಲ್ಲಿ ಚಿತ್ರಿಸಿ ಸಾಮಾಜಿಕ ಜಲಾತಾಣಗಳಲ್ಲಿ ಹರಿಬಿಟ್ಟಿದ್ದರು.
ಈ ವಿಡಿಯೋ ವ್ಯಾಪಕ ವೈರಲ್ ಆಗಿದ್ದು ಚಾಲಕನ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹ ಕೂಡಾ ವ್ಯಕ್ತವಾಗಿತ್ತು. ಇದೀಗ ಹಾನಗಲ್ KSRTC ಘಟಕದ ಚಾಲಕ ಎಆರ್ ಮುಲ್ಲಾನನ್ನು ಕರ್ತವ್ಯಲೋಪ ಅಡಿಯಲ್ಲಿ ಕೆಲಸದಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ತಿಳಿದು ಬಂದಿದೆ.





