ಕಾರು-ದ್ವಿಚಕ್ರ ವಾಹನದ ಮಧ್ಯೆ ಅಪಘಾತ: ಸವಾರನಿಗೆ ಗಾಯ
ವಿಟ್ಲ: ಕಾರು ಹಾಗೂ ದ್ವಿಚಕ್ರ ವಾಹನದ ಮಧ್ಯೆ ಅಪಘಾತ ನಡೆದು ಹಿಂಬದಿ ಸವಾರನಿಗೆ ಗಂಭೀರ ಗಾಯವಾದ ಘಟನೆ ಕುದ್ದುಪದವು – ಪೆರುವಾಯಿ ರಸ್ತೆಯ ಆದಾಳ ಸಮೀಪ ಗುರುವಾರ ಸಂಭವಿಸಿದೆ.

ಪೆರುವಾಯಿ ಕಡೆಯಿಂದ ಬರುತ್ತಿದ್ದ ದ್ವಿಚಕ್ರ ವಾಹನ ಹಾಗೂ ಕುದ್ದುಪದವಿನಿಂದ ಆಗಮಿಸಿದ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಪರಿಣಾಮ ದ್ವಿಚಕ್ರ ವಾಹನದ ಬಲ ಭಾಗಕ್ಕೆ ಸಂಪೂರ್ಣ ಹಾನಿಯುಂಟಾಗಿದೆ. ಜೊತೆಗೆ ಕಾರಿನ ಮುಂಭಾಗ ಜಖಂಗೊಂಡಿದೆ.
ಅಪಘಾತದಲ್ಲಿ ದ್ವಿಚಕ್ರ ವಾಹನದ ಹಿಂಬದಿ ಸವಾರನ ಕಾಲಿಗೆ ಗಂಭೀರ ಗಾಯವಾಗಿದೆ. ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.