ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ: ದಕ ಪ್ರಥಮ
2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಶೇ. 62.34 ರಿಸಲ್ಟ್ ಬಂದಿದೆ. ಎಂದಿನಂತೆ ಬಾಲಕರಿಗಿಂತ ಬಾಲಕಿಯರು ಹೆಚ್ಚು ಪ್ರತಿಶತದಷ್ಟು ಫಲಿತಾಂಶ ಪಡೆದಿದ್ದಾರೆ. 22 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ(ಶೇ.91.12), ಉಡುಪಿ ಜಿಲ್ಲೆ ದ್ವಿತೀಯ(ಶೇ.89.96), ಉತ್ತರ ಕನ್ನಡ ತೃತೀಯ ಮತ್ತು ಶಿವಮೊಗ್ಗ ಜಿಲ್ಲೆ ನಾಲ್ಕನೇ ಸ್ಥಾನ ಪಡೆದಿವೆ.