ಕರಾವಳಿರಾಜ್ಯ

ಮಂಗಳೂರು: ಗೃಹ ಸಚಿವ ಪರಮೇಶ್ವರ್ ಜೊತೆ ಅಸಮಾಧಾನ ತೋಡಿಕೊಂಡ ಜಿಲ್ಲೆಯ ಕಾಂಗ್ರೆಸ್  ಮುಖಂಡರು

ಮಂಗಳೂರು: ಇಂದು ಮಂಗಳೂರಿಗೆ ಆಗಮಿಸಿದ ರಾಜ್ಯ ಗೃಹಸಚಿವ ಡಾ. ಜಿ. ಪರಮೇಶ್ವರ್ ಅವರ ಜೊತೆ ದ.ಕ.ಜಿಲ್ಲೆಯ ಕಾಂಗ್ರೆಸ್ ನ ಮುಸ್ಲಿಂ ಮುಖಂಡರು ಮಾತುಕತೆ ನಡೆಸಿದ್ದು ಪ್ರಸಕ್ತ ಬೆಳವಣಿಗೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಬಗ್ಗೆ ವರದಿಯಾಗಿದೆ.



ನಗರದ ಸರ್ಕ್ಯೂಟ್‌ ಹೌಸ್‌ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸಮ್ಮುಖ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪಕ್ಷದ ಕಾರ್ಯಕರ್ತರ ಅಹವಾಲು ಆಲಿಸುತ್ತಿದ್ದರು. ಈ ಸಂದರ್ಭ ಕಾಂಗ್ರೆಸ್ ಮುಖಂಡರಾದ ಕೆ.ಕೆ.ಶಾಹುಲ್ ಹಮೀದ್, ಮಾಜಿ ಮೇಯ‌ರ್ ಕೆ. ಅಶ್ರಫ್, ಕೆಪಿಸಿಸಿ ಪ್ರ.ಕಾರ್ಯದರ್ಶಿ ಎಂ.ಎಸ್ ಮುಹಮ್ಮದ್, ಸುಹೈಲ್ ಕಂದಕ್ ಮತ್ತಿತರರು ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರದಲ್ಲಿದ್ದರೂ ಕೂಡ ಮುಸ್ಲಿಮರಿಗೆ ಅನ್ಯಾಯವಾಗುತ್ತಿದೆ, ಜಿಲ್ಲೆಯಲ್ಲಿ ಮುಸ್ಲಿಮರ ಕೊಲೆ, ಕೊಲೆಯತ್ನ ಪ್ರಕರಣಗಳು ಹೆಚ್ಚುತ್ತಿವೆ, ನಮಗೆ ನ್ಯಾಯ ನಿರಾಕರಣೆ ಆಗುತ್ತಿದೆ ಎಂದು ಅಸಮಾನ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.



ಪಕ್ಷದ ಜಿಲ್ಲಾ ಮಟ್ಟದ ನಾಯಕರು, ಕಾರ್ಯಕರ್ತರ ಅಹವಾಲುಗಳನ್ನು ಆಲಿಸಿದ ಗೃಹಸಚಿವರು ಸೂಕ್ತ ಕ್ರಮದ ಭರವಸೆ ನೀಡಿರುವುದಾಗಿ ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!