ಕಣ್ಣೂರು, ಉಳ್ಳಾಲದಲ್ಲಿ ಚೂರಿ ಇರಿತ ಪ್ರಕರಣ: ಮೂವರು ಆರೋಪಿಗಳ ಬಂಧನ
ಮಂಗಳೂರು: ನಗರ ಹೊರವಲಯದ ಕಣ್ಣೂರಿನ ನೌಶಾದ್ ಮತ್ತು ಉಳ್ಳಾಲದ ಫೈಝಲ್ ಎಂಬವರಿಗೆ ಚೂರಿಯಿಂದ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮುಡಿಪುವಿನ ಲೋಹಿತಾಶ್ವ (32), ವೀರನಗರದ ಪುನೀತ್ (28), ಕುತ್ತಾರ್‌ನ ಗಣೇಶ್ ಪ್ರಸಾದ್ (23) ಬಂಧಿತ ಆರೋಪಿಗಳು.
ತೊಕ್ಕೊಟ್ಟು ಸಮೀಪದ ಕಲ್ಲಾಪು ಮಾರ್ಕೆಟ್‌ಗೆ ತೆರಳಲು ಮುಂಜಾನೆ 3 ಗಂಟೆಗೆ ಅಡ್ಯಾರ್ ಕಣ್ಣೂರು ಹೆದ್ದಾರಿಯಲ್ಲಿ ನಿಂತಿದ್ದ ವೇಳೆ ಎರಡು ದ್ವಿಚಕ್ರ ವಾಹನದಲ್ಲಿ ಆಗಮಿಸಿದ ನಾಲ್ವರು ದುಷ್ಕರ್ಮಿಗಳು ನೌಷಾದ್‌ರ ಬೆನ್ನಿಗೆ ಚೂರಿಯಿಂದ ಇರಿದಿದ್ದರು.
ಫೈಝಲ್ ಅವರು ಕಲ್ಲಾಪು ಮಾರುಕಟ್ಟೆ ಗೆ ಬರುತ್ತಿದ್ದ ವೇಳೆ ಒಳಪೇಟೆ ಬಳಿ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.
ಇಬ್ಬರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.