ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳಕನಕಾರಿ ಕಮೆಂಟ್: ಯುವಕ ಅರೆಸ್ಟ್
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳಕನಕಾರಿ ಕಮೆಂಟ್ ಮಾಡಿದ ಆರೋಪಿಯನ್ನು ಕಾರ್ಕಳ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಕಾರ್ಕಳದ ಹೋಂ ಗಾರ್ಡ್ ಸಂಪತ್ ಸಾಲಿಯಾನ್ ಬಂಧಿತ ಆರೋಪಿ.
ಬೆಂಗಳೂರಿನ ಹೋಂ ಗಾರ್ಡ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಸಂಪತ್ ಸಾಲಿಯಾನ್ ಎಂಬಾತ ‘ಸಿಎಂ ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ’ ಎಂದು ಇನ್ಸ್ಟಾಗ್ರಾಮ್ ನಲ್ಲಿ ಪ್ರಚೋದನಕಾರಿ ಫೋಸ್ಟ್ ಮಾಡಿದ್ದಾನೆ. ಇನ್ನು ಈ ಸಂಬಂಧ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.