ಮೊಹಮ್ಮದ್ ಶಮಿಗೆ ಜೀವ ಬೆದರಿಕೆ
ಭಾರತ ಕ್ರಿಕೆಟ್ ತಂಡದ ವೇಗದ ಬೌಲರ್ ಮೊಹಮ್ಮದ್ ಶಮಿಗೆ ಇ-ಮೇಲ್ ಮೂಲಕ ಜೀವ ಬೆದರಿಕೆ ಹಾಕಲಾಗಿದೆ. ಮೊಹಮ್ಮದ್ ಶಮಿ ಸಹೋದರ ಮೊಹಮ್ಮದ್ ಹಸೀಬ್ ಅಮ್ರೋಹಾದಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಸೈಬರ್ ಸೆಲ್‌ನಲ್ಲಿ ಪ್ರಕರಣ ದಾಖಲಾಗಿದೆ ಎಂದು ಅಮ್ರೋಹಾ ಪೊಲೀಸರು ತಿಳಿಸಿದ್ದಾರೆ.

ಕ್ರಿಕೆಟಿಗ ಮೊಹಮ್ಮದ್ ಶಮಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ಪರವಾಗಿ ಐ ಪಿ ಎಲ್ ಆಡುತ್ತಿದ್ದಾರೆ. ರಜಪೂತ್ ಸಿಂಧರ್ ಎಂಬ ಮೇಲ್ ಐಡಿಯಿಂದ ಬೆದರಿಕೆ ಬಂದಿರುವುದಾಗಿ ಶಮಿ ಸಹೋದರ ಮೊಹಮ್ಮದ್ ಹಸೀಬ್ ಪೊಲೀಸರಿಗೆ ತಿಳಿಸಿದ್ದಾರೆ. ಇದರಲ್ಲಿ ಶಮಿಗೆ 1 ಕೋಟಿ ರೂಪಾಯಿ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ಹೇಳಿದರು.