ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ಭಾರತೀಯ ಸಶಸ್ತ್ರ ಪಡೆಗಳಿಂದ ದಾಳಿ
ತಡರಾತ್ರಿ ನಡೆಯಿತು ‘ಆಪರೇಷನ್ ಸಿಂಧೂರ್’
ಪಹಲ್ಗಾಮ್ ದಾಳಿಯ ಪ್ರತೀಕಾರವಾಗಿ ಭಾರತ ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ಶಿಬಿರಗಳ ವಿರುದ್ಧ ಯುದ್ಧ ಆರಂಭಿಸಿದೆ. ಮಂಗಳವಾರ ತಡರಾತ್ರಿ 2 ಗಂಟೆಯ ಸುಮಾರಿಗೆ ಭಾರತೀಯ ಸೇನೆಯು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಮೇಲೆ ‘ಆಪರೇಷನ್ ಸಿಂಧೂರ್’ ಹೆಸರಲ್ಲಿ ಕ್ಷಿಪಣಿ ದಾಳಿ ನಡೆಸಿದೆ. 9 ಭಯೋತ್ಪಾದಕ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ.

ಆಪರೇಷನ್ ಸಿಂಧೂರ್” ಎಂಬ ಹೆಸರಿನಲ್ಲಿ ಭಾರತೀಯ ಸೇನೆಯು ಈ ಕಾರ್ಯಾಚರಣೆ ನಡೆಸಿದ್ದು, ಪ್ರತೀಕಾರದ ದಾಳಿ ಆರಂಭಿಸಿದೆ. ದೇಶಾದ್ಯಂತ ಬುಧವಾರ 300ರಷ್ಟು ಸ್ಥಳಗಳಲ್ಲಿ ಯುದ್ಧದ ಅಣಕು ಕವಾಯತು ಆರಂಭವಾಗುವುದಕ್ಕೂ ಮುನ್ನವೇ ಯುದ್ಧ ಆರಂಭವಾಗಿದೆ ಎಂದು ಮೂಲಗಳು ತಿಳಿಸಿವೆ.
ನಮ್ಮ ಕ್ರಮಗಳು ಕೇಂದ್ರೀಕೃತವಾಗಿವೆ, ನಿಖರವಾಗಿವೆ. ಗುರಿಗಳ ಆಯ್ಕೆ ಮತ್ತು ದಾಳಿಯ ವಿಧಾನದಲ್ಲಿ ಭಾರತ ಗಣನೀಯ ಸಂಯಮವನ್ನು ಪ್ರದರ್ಶಿಸಿದೆ” ಎಂದು ಭಾರತ ಹೇಳಿದೆ. “ಈ ದಾಳಿಗೆ ಕಾರಣರಾದವರನ್ನು ಹೊಣೆಗಾರರನ್ನಾಗಿ ಮಾಡಲು ನಾವು ಬದ್ಧರಾಗಿದ್ದೇವೆ” ಎಂದಿದೆ.