ಆಪರೇಷನ್ ಸಿಂಧೂರ್: ಮೇ.9ರಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ
ಬೆಂಗಳೂರು: ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆಗೆ ಎಲ್ಲೆಡೆ ಭಾರೀ ಪ್ರಶಂಸೆ ವ್ಯಕ್ತವಾಗುತ್ತಿದೆ. ಈ ನಿಟ್ಟಿನಲ್ಲಿ ನಮ್ಮ ದೇಶದ ಸೈನಿಕರಿಗೆ ಕೃತಜ್ಞತೆ ಸಲ್ಲಿಸಲು ರಾಜ್ಯಾದ್ಯಂತ ಎಲ್ಲಾ ಮಸೀದಿಗಳಲ್ಲಿ ನಾಳೆ (ಶುಕ್ರವಾರ) ವಿಶೇಷ ಪ್ರಾರ್ಥನೆ ಸಲ್ಲಿಸಲಾಗುವುದು ಎಂದು ಅಲ್ಪಸಂಖ್ಯಾತ ವ್ಯವಹಾರಗಳ ಇಲಾಖೆ ಸಚಿವ ಬಿ ಝಡ್ ಜಮೀರ್ ಅಹ್ಮದ್ ತಿಳಿಸಿದ್ದಾರೆ.

ಶುಕ್ರವಾರ ಮಸೀದಿಗಳಲ್ಲಿ ಮುಸಲ್ಮಾನರೆಲ್ಲರೂ ಸೇರಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಭಾರತೀಯ ಸೈನಿಕರಿಗೆ ಕೃತಜ್ಞತೆ, ಧೈರ್ಯ ಹಾಗೂ ಶಕ್ತಿ ತುಂಬಲು ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.



