ಪಾಕಿಸ್ತಾನದ ಫೈಟರ್ ಜೆಟ್ ಧ್ವಂಸಗೊಳಿಸಿದ ಭಾರತೀಯ ಸೇನೆ
ನವದೆಹಲಿ: ಪಾಕಿಸ್ತಾನವು ಭಾರತೀಯ ಸೇನಾ ನೆಲೆಯನ್ನೇ ಗುರಿಯಾಗಿಸಿ ದಾಳಿ ಮಾಡಲು ಮುಂದಾಗಿದೆ. ಆದರೆ ಭಾರತ, ಪಾಕ್ ಡ್ರೋನ್‌ಗಳನ್ನು ಹೊಡೆದುರುಳಿಸಿದೆ. ಜಮ್ಮು ವಾಯುನೆಲೆ, ಜೈಸಲ್ಮೇರ್, ಪಠಾಣ್‌ಕೋಟ್, ಅಖ್ನೂರ್, ರಾಜೌರಿ,ಪೂಂಚ್, ತಂಗಹಾರ್, ಸೇರಿದಂತೆ ಗಡಿ ಸಮೀಪದ ಹಲವಾರು ಪ್ರದೇಶಗಳ ಮೇಲೆ ಪಾಕಿಸ್ತಾನ ಡ್ರೋನ್ ದಾಳಿಗೆ ಯತ್ನಿಸಿದೆ. ಆದರೆ ಇದನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಅಲ್ಲದೇ ಪಾಕಿಸ್ತಾನದ ಫೈಟರ್ ಜೆಟ್ ಎಫ್-16 ಅನ್ನು ಭಾರತೀಯ ಸೇನಾಪಡೆ ಧ್ವಂಸಗೊಳಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಜಮ್ಮು ವಿಮಾನ ನಿಲ್ದಾಣದ ಮೇಲೆ ದಾಳಿ ಮಾಡಲು ಪಾಕಿಸ್ತಾನ ವಿಫಲ ಪ್ರಯತ್ನ ನಡೆಸಿದ್ದು,ಎಸ್ -400 ಹಲವಾರು ಪಾಕ್ ಡ್ರೋನ್‌ಗಳನ್ನು ಭಾರತ ಹೊಡೆದುರುಳಿಸಿದೆ. ಪಾಕಿಸ್ತಾನದಿಂದ ಕಳುಹಿಸಲಾದ ಕ್ಷಿಪಣಿ, ಡ್ರೋನ್‌ಗಳನ್ನು ಭಾರತೀಯ ಸೇನೆ ಧ್ವಂಸಗೊಳಿಸಿದೆ. ಇನ್ನು ಪಾಕಿಸ್ತಾನದ 1 ಎಫ್-16, 2 ಜೆಎಫ್-17 ಫೈಟರ್ ಜೆಟ್‌ಗಳನ್ನು ಧ್ವಂಸ ಮಾಡಿದೆ.