ಕರಾವಳಿಕ್ರೈಂ

ಪ್ರಚೋದನಕಾರಿ ಪೋಸ್ಟ್:  1 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ ಹೊಂದಿದ್ದ ಇನ್‌ಸ್ಟಾಗ್ರಾಂ ಫೇಜ್ ನಿಷ್ಕ್ರಿಯ

ಮಂಗಳೂರು: ಇತ್ತೀಚೆಗೆ ಮಂಗಳೂರು ನಗರದ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಪೋಸ್ಟ್ ಮಾಡಿದ ಆರೋಪದ ಮೇಲೆ 1 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ ಹೊಂದಿದ್ದ ಇನ್‌ಸ್ಟಾಗ್ರಾಂ ಫೇಜ್ ವೊಂದನ್ನು ನಿಷ್ಕ್ರಿಯಗೊಳಿಸಲಾಗಿದೆ.

‘beary_royal_nawab’ ಧಾರ್ಮಿಕ ಮತ್ತು ಸಮುದಾಯ ಗುಂಪುಗಳ ನಡುವೆ ದ್ವೇಷವನ್ನು ಪ್ರಚೋದಿಸುವ ವಿಷಯವನ್ನು ಪೋಸ್ಟ್ ಮಾಡುತ್ತಿತ್ತು. ಈ ಪೋಸ್ಟ್‌ಗಳು ಒಂದು ಸಮುದಾಯವನ್ನು ಮತ್ತೊಂದು ಸಮುದಾಯವನ್ನು ಗುರಿಯಾಗಿಸಿಕೊಂಡು ದ್ವೇಷವನ್ನು ಉತ್ತೇಜಿಸುತ್ತಿದ್ದವು ಮತ್ತು ಕಾನೂನುಬಾಹಿರ ಚಟುವಟಿಕೆಗಳನ್ನು ಪ್ರೋತ್ಸಾಹಿಸುತ್ತವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಇನ್‌ಸ್ಟಾಗ್ರಾಂ ಪೇಜ್ ವಿರುದ್ಧ ಬರ್ಕೆ ಮತ್ತು ಮುಲ್ಕಿ ಪೊಲೀಸ್ ಠಾಣೆಗಳಲ್ಲಿ ಇಲ್ಲಿಯವರೆಗೆ ಮೂರು ಪ್ರಕರಣಗಳು ದಾಖಲಾಗಿವೆ.

Leave a Reply

Your email address will not be published. Required fields are marked *

error: Content is protected !!