ಮಹಿಳೆಯೊಂದಿಗೆ ಅಸಭ್ಯ ವರ್ತನೆ: ಪದ್ಮನಾಭ ಸಪಲ್ಯ ಬಿಜೆಪಿ ಪಕ್ಷದಿಂದ ಉಚ್ಚಾಟನೆ
ಪುತ್ತೂರು: ಜಾಗದ ತಕರಾರಿಗೆ ಸಂಬಂಧಿಸಿ ಮಹಿಳೆಯೋರ್ವರಿಗೆ ಗುಪ್ತಾಂಗ ತೋರಿಸಿದ ಆರೋಪದಲ್ಲಿ ಗ್ರಾಪಂ ಉಪಾಧ್ಯಕ್ಷರೊಬ್ಬರ ವಿರುದ್ಧ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ಹಿನ್ನೆಲೆಯಲ್ಲಿ ಇಡ್ಕಿದು ಗ್ರಾಪಂ ಉಪಾಧ್ಯಕ್ಷರೂ ಆಗಿರುವ ಪದ್ಮನಾಭ ಸಪಲ್ಯರವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಭಾರತೀಯ ಜನತಾ ಪಾರ್ಟಿಯ ಪ್ರಾಥಮಿಕ ಸದಸ್ಯತ್ವ ರದ್ದುಗೊಳಿಸಿ, ಪಕ್ಷದಿಂದ ಉಚ್ಚಾಟನೆ ಮಾಡಿದೆ. ಅದೇ ರೀತಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸ್ಥಾನಕ್ಕೂ ಅವರಿಗೆ ರಾಜೀನಾಮೆ ನೀಡಲು ಸೂಚಿಸಿದೆ ಎಂದು ತಿಳಿದು ಬಂದಿದೆ.