ಕಾಮಿಡಿ ಕಿಲಾಡಿಗಳು ಖ್ಯಾತಿಯ ರಾಕೇಶ್ ಪೂಜಾರಿ ನಿಧನ
ಕನ್ನಡ ಕಿರುತೆರೆಯಲ್ಲಿ ತನ್ನ ಹಾಸ್ಯದ ಮೂಲಕ ಜನರ ಮನಗೆದ್ದ ನಟ ರಾಕೇಶ್ ಪೂಜಾರಿ ಅವರು ನಿಧನರಾಗಿದ್ದಾರೆ.

ಕಳೆದ ರಾತ್ರಿ ಉಡುಪಿ ಜಿಲ್ಲೆಯ ಕಾರ್ಕಳದ ನಿಟ್ಟೆ ಸಮೀಪದ ಮೆಹಂದಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಡ್ಯಾನ್ಸ್ ಮಾಡಿದ್ದರು. ಸ್ನೇಹಿತರ ಜೊತೆ ಇದ್ದ ಸಂದರ್ಭದಲ್ಲಿ ಹೃದಯಾಘಾತ ಸಂಭವಿಸಿದ್ದು,
ರಾಕೇಶ್ ಅವರನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದ್ದಾರೆ ಎಂದು ವರದಿಯಾಗಿದೆ.