ಅಂತಾರಾಷ್ಟ್ರೀಯಕ್ರೀಡೆರಾಷ್ಟ್ರೀಯ

ಅಭಿಮಾನಿಗಳಿಗೆ ಬಿಗ್ ಶಾಕ್ ನೀಡಿದ ವಿರಾಟ್ ಕೊಹ್ಲಿ

ಟೀಮ್ ಇಂಡಿಯಾದ ರನ್ ಮೆಷಿನ್ ಖ್ಯಾತಿಯ ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಬಿಗ್ ಶಾಕ್ ನೀಡಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಕೊಹ್ಲಿ ಅಧಿಕೃತವಾಗ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಇದರೊಂದಿಗೆ ಕಿಂಗ್ ಕೊಹ್ಲಿಯ 14 ವರ್ಷದ ಟೆಸ್ಟ್ ಕೆರಿಯರ್ ಅಂತ್ಯಗೊಂಡಂತಾಗಿದೆ.



2011 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಟೆಸ್ಟ್ ಕೆರಿಯರ್ ಆರಂಭಿಸಿದ್ದ ವಿರಾಟ್ ಕೊಹ್ಲಿ, 2014 ರಲ್ಲಿ ಭಾರತ ಟೆಸ್ಟ್ ತಂಡದ ನಾಯಕರಾಗಿ ಆಯ್ಕೆಯಾಗಿದ್ದರು. ಟೀಮ್ ಇಂಡಿಯಾ ಪರ 123 ಟೆಸ್ಟ್ ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಅವರು 210 ಇನಿಂಗ್ಸ್ ಆಡಿದ್ದು ಈ ವೇಳೆ 16608 ಎಸೆತಗಳನ್ನು ಎದುರಿಸಿರುವ ಕೊಹ್ಲಿ ಒಟ್ಟು 9230 ರನ್ ಕಲೆಹಾಕಿದ್ದಾರೆ. ಇದರ ನಡುವೆ 30 ಶತಕ ಹಾಗೂ 31 ಅರ್ಧಶತಕಗಳನ್ನು ಬಾರಿಸಿದ್ದಾರೆ.


ಹಾಗೆಯೇ ಭಾರತ ಟೆಸ್ಟ್ ತಂಡವನ್ನು 68 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಕೊಹ್ಲಿ ನಾಯಕತ್ವದಲ್ಲಿ ಟೀಮ್ ಇಂಡಿಯಾ 40 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಕೇವಲ 17 ಮ್ಯಾಚ್ಗಳಲ್ಲಿ ಮಾತ್ರ ಸೋಲನುಭವಿಸಿದೆ. ಇನ್ನು 11 ಪಂದ್ಯಗಳಲ್ಲಿ ಭಾರತ ತಂಡವು ಡ್ರಾ ಸಾಧಿಸಿದೆ. ಈ ಮೂಲಕ ವಿರಾಟ್ ಕೊಹ್ಲಿ ಭಾರತ ಟೆಸ್ಟ್ ತಂಡದ ಅತ್ಯಂತ ಯಶಸ್ವಿ ನಾಯಕ ಎನಿಸಿಕೊಂಡಿದ್ದಾರೆ

Leave a Reply

Your email address will not be published. Required fields are marked *

error: Content is protected !!