ಕರಾವಳಿ

ಚೈತ್ರಾ ಕುಂದಾಪುರ ತಂದೆಯಿಂದ ಮಗಳ ಮೇಲೆ ಆರೋಪ

ಕುಂದಾಪುರ:  ಚೈತ್ರಾ ಕುಂದಾಪುರ ಅವರು ಇತ್ತೀಚೆಗೆ ಮದುವೆ ಆಗಿದ್ದರು. ಈ ವಿವಾಹ ಸರಳವಾಗಿ ನಡೆದಿತ್ತು. ಚೈತ್ರಾ ಅವರು ಶ್ರೀಕಾಂತ್ ಕಶ್ಯಪ್ ಹೆಸರಿನ ವ್ಯಕ್ತಿಯನ್ನು ವರಿಸಿದ್ದಾರೆ.  ಹೀಗಿರುವಾಗಲೇ ಚೈತ್ರಾ ಕುಂದಾಪುರ ತಂದೆ ಬಾಲಕೃಷ್ಣ ನಾಯ್ಕ್ ಬಹು ದೊಡ್ಡ ಆರೋಪ ವೊಂದನ್ನು ಮಾಡಿದ್ದು ಇದೀಗ ಭಾರೀ ಸುದ್ದಿಯಾಗಿದೆ.

‘ನನ್ನ ಮಗಳು ವಿವಾಹಕ್ಕೆ ನನಗೆ ಸರಿಯಾದ ಆಮಂತ್ರಣ ಕೊಟ್ಟಿಲ್ಲ’ ‘ಮಗಳ ಮದುವೆಯನ್ನು ನಾನು ಒಪ್ಪಲಾರೆ. ಚೈತ್ರಾ ಹಾಗೂ ಆಕೆಯ ಪತಿ ಇಬ್ಬರೂ ಕಳ್ಳರು. ನನ್ನ ಪತ್ನಿ ಕೂಡ ಮಗಳ ಬೆಂಬಲಕ್ಕೆ ನಿಂತಿದ್ದಾಳೆ. ಇವರೆಲ್ಲ ಹಣದ ಆಸೆಗಾಗಿ ಹೀಗೆ ಮಾಡುತ್ತಿದ್ದಾರೆ. ಗೋವಿಂದ ಬಾಬು ಪೂಜಾರಿ ಪ್ರಕರಣದಲ್ಲೂ ಇವರು ಹಣ ಹಂಚಿಕೊಂಡಿದ್ದಾರೆ. ನನಗೆ ನನ್ನ ದೊಡ್ಡ ಮಗಳು ಮಾತ್ರ ಆಸರೆ’ ಎಂದು ಬಾಲಕೃಷ್ಣ ಹೇಳಿದ್ದಾರೆ.

ಚೈತ್ರಾ ಬಿಗ್ ಬಾಸ್ಗೆ ಹೋಗುವ ವಿಚಾರವನ್ನು ಬಾಲಕೃಷ್ಣ ಅವರಿಗೆ ಹೇಳಿರಲೇ ಇಲ್ಲವಂತೆ. ‘ಚೈತ್ರಾ ಬಿಗ್ ಬಾಸ್ ಮನೆಗೆ ಹೋಗುವಾಗಲೂ ನನಗೆ ಹೇಳಿಲ್ಲ. ನನ್ನನ್ನು ಮನೆಯಲ್ಲಿ ಬಿಟ್ಟು ಅಮ್ಮ-ಮಗಳು ಬೀಗ ಹಾಕಿ ಹೋಗಿದ್ದರು. ನಾನು ಕಟ್ಟಿದ ಮನೆಯಲ್ಲಿ ಈಗ ನಾನೇ ಅನಾಥ. ಚೈತ್ರಾ ಮಾತಿಗೂ ಕೃತಿಗೂ ಸಂಬಂಧವೇ ಇಲ್ಲ’ ಎಂದು ಬಾಲಕೃಷ್ಣ ಅಸಮಾಧಾನ ಹೊರಹಾಕಿದ್ದಾರೆ.

ತಂದೆಯ ಹೇಳಿಕೆ ಬೆನ್ನಲ್ಲೇ ಚೈತ್ರಾ ಕುಂದಾಪುರ ಅವರು ಇನ್ಸ್ಟಾಗ್ರಾಮ್ನಲ್ಲಿ ಸ್ಟೇಟಸ್ ಒಂದನ್ನು ಹಾಕಿದ್ದಾರೆ. ‘ಕುಡುಕ ತಂದೆಯ ಚಿತ್ರ ಹಿಂಸೆ ಅನುಭವಿಸಿದವರಿಗಷ್ಟೇ ಗೊತ್ತು. ಎಂತಹ ಮಕ್ಕಳಿಗೂ ಕುಡುಕ ತಂದೆ ಸಿಗಬಾರದು. ಎರಡು ಕ್ವಾಟ‌ರ್ ನಾನು ಕೊಟ್ರೆ ನನ್ನ ಮಕ್ಕಳು ದೇವರು ಅನ್ನುವವರ ಮಾತಿಗೆ ಬೆಲೆ ಕೊಡುವವರು ಮೂರ್ಖರಾಗ್ತಾರೆ’ ಎಂದು ಚೈತ್ರಾ ಬರೆದಿದ್ದಾರೆ. ಒಟ್ಟಿನಲ್ಲಿ ತಂದೆ-ಮಗಳ ವಿಚಾರ ಹೊಸ ಚರ್ಚೆ ಹುಟ್ಟು ಹಾಕಿದೆ.

Leave a Reply

Your email address will not be published. Required fields are marked *

error: Content is protected !!