ಕರ್ನಲ್ ಸೋಫಿಯಾ ಖುರೇಷಿ ಕುರಿತು ಹೇಳಿಕೆ: ಸಚಿವ ವಿಜಯ್ ಶಾಗೆ ಸುಪ್ರೀಂ ಕೋರ್ಟ್ ತರಾಟೆ
ನವದೆಹಲಿ: ಕರ್ನಲ್ ಸೋಫಿಯಾ ಖುರೇಷಿ ಕುರಿತು ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿಕೊಂಡಿರುವ ಮಧ್ಯಪ್ರದೇಶ ಬಿಜೆಪಿ ಸಚಿವ ವಿಜಯ್ ಶಾ ಸಲ್ಲಿಸಿರುವ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತು ಎಂದಿದೆ.

ಕರ್ನಲ್ ಸೋಫಿಯಾ ಖುರೇಷಿ
ತಮ್ಮ ವಿರುದ್ಧ ಮಧ್ಯ ಪ್ರದೇಶ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ಸಚಿವ ವಿಜಯ್ ಶಾ ಸಲ್ಲಿಸಿರುವ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ನಾಳೆ ವಿಚಾರಣೆ ನಡೆಸಲಿದೆ.
ವಿಜಯ್ ಶಾ ಸಲ್ಲಿಸಿದ್ದ ಅರ್ಜಿ ಸ್ವೀಕಾರದ ವೇಳೆ ಮಾತನಾಡಿದ ಸುಪ್ರೀಂ ಕೋರ್ಟ್, “ನೀವು ಯಾವ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದೀರಿ” ಎಂದು ಪ್ರಶ್ನಿಸಿತು. ಅಲ್ಲದೆ ಮೊದಲು “ಹೋಗಿ ಕ್ಷಮೆಯಾಚಿಸಿ. ಸ್ವಲ್ಪ ಸಂವೇದನಾಶೀಲತೆ ತೋರಿಸಿ” ಎಂದು ನ್ಯಾಯಾಲಯವು ವಿಜಯ್ ಶಾ ವಿರುದ್ಧ ಕಿಡಿಕಾರಿದೆ.
ಆಪರೇಷನ್ ಸಿಂಧೂರ್ ಸಮಯದಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದ ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳ ಕುರಿತು ಮಧ್ಯಪ್ರದೇಶ ಸಚಿವ ಕುನ್ವರ್ ವಿಜಯ್ ಶಾ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು. ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 152, 196(1)(ಬಿ), ಮತ್ತು 197(1)(ಸಿ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.