ಕರಾವಳಿಕ್ರೈಂ

ಬಂಟ್ವಾಳ: ಎರಡು ಲಾರಿಗಳ ನಡುವೆ ಅಪಘಾತ, ಓರ್ವ ಮೃತ್ಯು

ಬಂಟ್ವಾಳ: ಎರಡು ಲಾರಿಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಲಾರಿಯಲ್ಲಿದ್ದ ಜಲ್ಲಿ ಮಿಶ್ರಿತ ಡಾಮರು ಮೈಮೇಲೆ ಬಿದ್ದು ಚಾಲಕನೋರ್ವ ಮೃತಪಟ್ಟ ಘಟನೆ ಬಂಟ್ವಾಳದ ಸಜೀಪದ ಬಳಿ ಗುರುವಾರ ನಡೆದಿದೆ.


ಮೃತ ಚಾಲಕನನ್ನು ಸಜೀಪನಡು ಗೋಳಿಪಡ್ಪು ನಿವಾಸಿ ರಫೀಕ್ ( 45ವ) ಎಂದು ಗುರುತಿಸಲಾಗಿದೆ. ಲಾರಿಯಲ್ಲಿದ್ದ ಕ್ಲೀನರ್ ಯೂಸುಫ್ ಎಂಬಾತನ ಕೈ ಕಾಲುಗಳ ಮೇಲೆ ಡಾಮರು ಬಿದ್ದಿದ್ದು ಗಂಭೀರವಾಗಿದೆ. ಇನ್ನೊಂದು ಲಾರಿಯ ಚಾಲಕ ರಿಜ್ವಾನ್ ಹಾಗೂ ಅಲ್ಪಾಸ್ ಎಂಬವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಂಚಿನಡ್ಕಪದವು ಕಡೆಯಿಂದ ಸಜೀಪನಡು ಹೋಗುತ್ತಿದ್ದ ವೇಳೆ ಕಂಚಿನಡ್ಕಪದವು ಎಂಬಲ್ಲಿ ಅಪಘಾತ ಸಂಭವಿಸಿದೆ. ಕೆಂಪು ಕಲ್ಲುಗಳನ್ನು ಸಾಗಿಸುವ ಲಾರಿಗೆ ಹಿಂಬದಿಯಿಂದ ಬರುತ್ತಿದ್ದ ಡಾಮರು ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಎರಡು ಟಿಪ್ಪರ್ ಲಾರಿಗಳು ಅಡಿಕೆ ತೋಟಕ್ಕೆ ಪಲ್ಟಿಯಾಗಿ ಬಿದ್ದಿದೆ.


ಟಿಪ್ಪರ್ ಲಾರಿಯಲ್ಲಿದ್ದ ಡಾಮರು ಮಿಶ್ರಿತ ಜಲ್ಲಿ ಕಲ್ಲುಗಳು ಕೆಂಪು ಕಲ್ಲು ಸಾಗಿಸುವ ಲಾರಿ ಚಾಲಕನ ಮೈ ಮೇಲೆ ಬಿದ್ದಿದೆ. ಕೂಡಲೇ ಮಂಗಳೂರು ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತಾದರೂ ಯಾವುದೇ ಪ್ರಯೋಜನವಾಗಿಲ್ಲ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!