ಪೆಟ್ರೋಲ್ ತುಂಬಿಸಿ ಹಣ ನೀಡದೇ ಪರಾರಿಯಾದ ಕಾರು ಅಪಘಾತ, ಇಬ್ಬರು ಪೊಲೀಸ್ ವಶಕ್ಕೆ
ಬಂಟ್ವಾಳ: ಕಾರಿಗೆ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಹಾಕಿಸಿ ಹಣ ನೀಡದೆ ಇಬ್ಬರು ಯುವಕರು ಪರಾರಿಯಾಗಿದ್ದು, ಸಮೀಪದ ಪಾಲ್ತಾಜೆಯಲ್ಲಿ ಆಕ್ಟಿವಾ ಮತ್ತು ಪಿಕಪ್ ವಾಹನಕ್ಕೆ ಢಿಕ್ಕಿ ಹೊಡೆದ ಘಟನೆ ಮೇ 20ರಂದು ನಡೆದಿದೆ.

ಅಪಘಾತದಲ್ಲಿ ಆಕ್ಟಿವಾ ಸವಾರ ಕಟ್ಟತ್ತಿಲ ನಿವಾಸಿ ಅಬೂಬಕ್ಕರ್ ಅವರಿಗೆ ಗಂಭೀರ ಗಾಯಗಳಾಗಿವೆ. ಬಿಸಿ ರೋಡ್ ನ ಪೆಟ್ರೋಲ್ ಬಂಕ್ ನಲ್ಲಿ ಕಾರಿಗೆ ಪೆಟ್ರೋಲ್ ತುಂಬಿಸಿ ಹಣ ನೀಡದೆ ಪರಾರಿಯಾಗಿದ್ದರು.
ಸ್ಥಳಕ್ಕೆ ಪೊಲೀಸರು ಆಗಮಿಸಿ ಕಾರು ಮತ್ತು ಮದ್ಯದ ನಶೆಯಲ್ಲಿದ್ದ ಯುವಕರಿಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಹಿಂದಿ ಭಾಷೆಯಲ್ಲಿ ಮಾತನಾಡುತ್ತಿದ್ದ ಈ ಯುವಕರನ್ನು ಹೊರ ರಾಜ್ಯದವರು ಎನ್ನಲಾಗಿದೆ.





