ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
ಇಂಡಿಯನ್ ಪ್ರೀಮಿಯರ್ ಲೀಗ್ ನ 62ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡ ಜಯ ಸಾಧಿಸಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದ ಬಳಿಕ ಎರಡೂ ತಂಡಗಳ ಆಟಗಾರರು ಪರಸ್ಪರ ಹಸ್ತಲಾಘವ ಮಾಡುತ್ತಿದ್ದರು.

ಈ ವೇಳೆ ರಾಜಸ್ಥಾನ ತಂಡದ 14 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ ಧೋನಿ ಅವರ ಪಾದಗಳನ್ನು ಮುಟ್ಟಿ ನಮಸ್ಕರಿಸಿದರು. ಇದೇ ವೇಳೆ ಧೋನಿ ಯುವ ಆಟಗಾರನ ಬೆನ್ನು ತಟ್ಟಿದರು. ಇದೀಗ ಲೆಜೆಂಡ್ ಆಟಗಾರನಿಗೆ ಯುವ ಆಟಗಾರ ನೀಡಿದ ಗೌರವದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಯುವ ಆಟಗಾರನ ನಡೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.