ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಮೃತ್ಯು
ವಿಟ್ಲ: ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಶುಕ್ರವಾರ ಕನ್ಯಾನದಲ್ಲಿ ನಡೆದಿದೆ.

ಕನ್ಯಾನ ನಿವಾಸಿ ಮಿತ್ತನಡ್ಕ ಪಿಕಪ್ ಚಾಲಕ ಸತೀಶ್ (33) ಮೃತ ವ್ಯಕ್ತಿ. ಪತ್ನಿಯ ಸೀಮಂತದ ದಿನ ಕುಸಿದು ಬಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತರಾಗಿದ್ದಾರೆ ಎಂದು ತಿಳಿದು ಬಂದಿದೆ.