ಕಾರಿನಲ್ಲಿ ಒಂದೇ ಕುಟುಂಬದ 7 ಮಂದಿಯ ಮೃತದೇಹ ಪತ್ತೆ!
ನಿಲ್ಲಿಸಿದ್ದ ಕಾರಿನಲ್ಲಿ ಒಂದೇ ಕುಟುಂಬದ 7 ಮಂದಿಯ ಮೃತದೇಹ ಪತ್ತೆಯಾದ ಘಟನೆ ಹರ್ಯಾಣಾದ ಪಂಚಕುಲದಲ್ಲಿ ನಡೆದಿದೆ.
ಡೆಹ್ರಾಡೂನ್ನ ಒಂದೇ ಕುಟುಂಬದ 7 ಮಂದಿಯ ಮೃತದೇಹ ಪತ್ತೆಯಾಗಿದ್ದು ಕುಟುಂಬವು ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗಿದೆಯಾದರೂ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.
ವಿಧಿವಿಜ್ಞಾನ ತಂಡವು ಸ್ಥಳಕ್ಕೆ ತಲುಪಿದೆ. ಅಪರಾಧ ಸ್ಥಳದಿಂದ ಎಲ್ಲಾ ಪುರಾವೆಗಳನ್ನು ಸಂಗ್ರಹಿಸಿ ತನಿಖೆ ನಡೆಸುತ್ತೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಪಂಚಕುಲದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.