ರಾಜ್ಯ

ಮತ್ತೆ ಇಬ್ಬರು ಶಾಸಕರನ್ನು ಆರು ವರ್ಷ ಪಕ್ಷದಿಂದ ಉಚ್ಚಾಟಿಸಿದ ಬಿಜೆಪಿ

ಬೆಂಗಳೂರು: ಪಕ್ಷವಿರೋಧಿ ಚಟುವಟಿಕೆ ಆರೋಪದ ಮೇರೆಗೆ ಭಾರತೀಯ ಜನತಾ ಪಕ್ಷದ ಶಾಸಕ ST ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.


ಈ ಹಿಂದೆ ಬಿಜೆಪಿ ಪಕ್ಷದ ವಿರುದ್ಧವೇ ಬಹಿರಂಗವಾಗಿ ಮಾತನಾಡುತ್ತಿದ್ದ ಮತ್ತು ಕಾಂಗ್ರೆಸ್ ಪಾಳಯದಲ್ಲಿ ಪದೇ ಪದೇ ಗುರುತಿಸಿಕೊಳ್ಳುತ್ತಿದ್ದ ರೆಬೆಲ್ ಶಾಸಕರಾದ ಎಸ್ ಟಿ ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ಅವರನ್ನು ಮುಂದಿನ 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ತಿಳಿದುಬಂದಿದೆ.



ಈ ಹಿಂದೆ ಪಕ್ಷ ವಿರೋದಿ ಚಟುವಟಿಕೆ ಹಿನ್ನಲೆಯಲ್ಲಿ ಶಾಸಕರಾದ ಎಸ್‌.ಟಿ. ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಅವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಕೇಂದ್ರ ಸಮಿತಿಗೆ ಬಿಜೆಪಿ ಶಿಸ್ತು ಸಮಿತಿ ವರದಿ ನೀಡಿತ್ತು.

Leave a Reply

Your email address will not be published. Required fields are marked *

error: Content is protected !!