ಬಜರಂಗದಳ ಮುಖಂಡ ಶರಣ್ ಪಂಪ್‌ವೆಲ್ ಗೆ ಜಾಮೀನು ಮಂಜೂರು
ಮಂಗಳೂರು: ಬಜರಂಗದಳ ಮುಖಂಡ ಶರಣ್ ಪಂಪ್‌ವೆಲ್‌ಗೆ ಜಾಮೀನು ಮಂಜೂರಾಗಿದೆ.

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಬಂದ್‌ಗೆ ಕರೆ ನೀಡಿದ್ದ ಆರೋಪದ ಮೇಲೆ ಕದ್ರಿ ಪೊಲೀಸರು ಅವರನ್ನು ಬಂಧಿಸಿದ್ದರು.
ಬಂಧನದ ಬಳಿಕ ಶರಣ್ ಪಂಪ್‌ವೆಲ್ ಅವರನ್ನು ಮಂಗಳೂರಿನ ಬೋಂದೆಲ್‌ನಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ ಪೊಲೀಸರು ಹಾಜರುಪಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಧೀಶರು, ಶರಣ್ ಪಂಪ್‌ವೆಲ್‌ಗೆ ಜಾಮೀನು ನೀಡಿ ಆದೇಶಿಸಿದರು.
ಇದೀಗ ನ್ಯಾಯಾಲಯದಿಂದ ಜಾಮೀನು ದೊರೆತಿರುವುದರಿಂದ ಶರಣ್ ಪಂಪ್‌ವೆಲ್ ಬಿಡುಗಡೆಯಾಗಿದ್ದಾರೆ.