ಉಪ್ಪಿನಂಗಡಿ ಹಳೆ ಸೇತುವೆ ಬಂದ್ ಮಾಡಲು ಶಾಸಕರ ಸೂಚನೆ
ಪುತ್ತೂರು: ಉಪ್ಪಿನಂಗಡಿಯ ಕುಮಾರಧಾರ ನದಿಯಲ್ಲಿರುವ ಹಳೆಯ ಸೇತುವೆಯನ್ನು ಬಂದ್ ಮಾಡುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ ನೀಡಿದ್ದಾರೆ.

ಸೇತುವೆ ಹಳೆಯದಾಗಿರುವ ಕಾರಣ ಅದರ ಮೇಲೆ ವಾಹನ ಸಂಚಾರವಾದರೆ ಅಪಾಯ ಉಂಟಾಗುವ ಸಂಭವ ಇದೆ. ಸೇತುವೆಯ ಕಬ್ಬಿಣಗಳನ್ನು ಕಳವು ಮಾಡಿದ್ದಾರೆ. ಇದರ ಮೇಲೆ ಯಾವುದೇ ವಾಹನಗಳು ಸಂಚರಿಸದಂತೆ ಸೂಚನೆ ನೀಡಿದ್ದಾರೆ. ಮಳೆಗಾಲದ ಮುನ್ನೆಚ್ಚರಿಕೆಗಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಉಪ್ಪಿನಂಗಡಿಯ ನೇತ್ರಾವತಿ ಸಭಾಂಗಣದಲ್ಲಿ ನಡೆದ ಪಾಕೃತಿಕ ವಿಕೋಪ ತಡೆ ನಿರ್ವಹಣಾ ಸಭೆಯಲ್ಲಿ ಈ ಆದೇಶ ಮಾಡಲಾಗಿದೆ.